ETV Bharat / bharat

ತೆಲಂಗಾಣದಲ್ಲಿ ಬಿಆರ್‌ಎಸ್, ಬಿಎಸ್‌ಪಿ ಕಾರ್ಯಕರ್ತರ ಘರ್ಷಣೆ - ಭಾರತ್ ರಾಷ್ಟ್ರ ಸಮಿತಿ

BRS BSP workers clash in Telangana: ತೆಲಂಗಾಣದ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ಕಾಗಜ್‌ನಗರ ಪಟ್ಟಣದಲ್ಲಿ ಬಿಆರ್‌ಎಸ್ ಹಾಗೂ ಬಿಎಸ್‌ಪಿ ಕಾರ್ಯಕರ್ತರ ನಡುವೆ ಭಾನುವಾರ ರಾತ್ರಿ ಘರ್ಷಣೆ ನಡೆದಿದೆ.

BRS BSP workers clash
ತೆಲಂಗಾಣದಲ್ಲಿ ಬಿಆರ್‌ಎಸ್, ಬಿಎಸ್‌ಪಿ ಕಾರ್ಯಕರ್ತರ ಘರ್ಷಣೆ
author img

By ETV Bharat Karnataka Team

Published : Nov 13, 2023, 11:37 AM IST

ಹೈದರಾಬಾದ್: ತೆಲಂಗಾಣದ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ಕಾಗಜ್‌ನಗರ ಪಟ್ಟಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಬೆಂಬಲಿಗರ ನಡುವೆ ಘರ್ಷಣೆ ಉಂಟಾದ ಘಟನೆ ಭಾನುವಾರ ರಾತ್ರಿ ಘಟನೆ ನಡೆದಿದೆ.

ಬಿಎಸ್ಪಿ ರಾಜ್ಯಾಧ್ಯಕ್ಷ ಆರ್.ಎಸ್. ಪ್ರವೀಣ್ ಕುಮಾರ್ ಅವರು ಭಾಗವಹಿಸಿದ್ದ ಚುನಾವಣಾ ಸಭೆಗೆ ಆಡಳಿತ ಪಕ್ಷದ ಬೆಂಬಲಿಗರು ಅಡ್ಡಿಪಡಿಸಿದ ವೇಳೆ ಗಲಾಟೆ ಶುರುವಾಗಿತ್ತು. ಸಾರ್ವಜನಿಕ ಸಭೆ ನಡೆಸುತ್ತಿದ್ದ ಸ್ಥಳಕ್ಕೆ ಬಂದಿದ್ದ ಬಿಎಸ್‌ಪಿ ಪ್ರಚಾರ ವಾಹನದಿಂದ ಭಾರಿ ಧ್ವನಿಯಲ್ಲಿ ಹಾಡುಗಳನ್ನು ಕೇಳಿಸುತ್ತಿತ್ತು ಎಂದು ಬಿಎಸ್‌ಪಿ ಮುಖಂಡರು ಆರೋಪಿಸಿದ್ದಾರೆ. ಇದು ಎರಡೂ ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಯಿತು. ಈ ವೇಳೆ ಗುಂಪುಗಳನ್ನು ಚದುರಿಸಲು ಪೊಲೀಸರು ಮಧ್ಯಪ್ರವೇಶಿಸಿದರು.

''ತಮ್ಮ ಮನವಿಯ ಹೊರತಾಗಿಯೂ ಬಿಆರ್‌ಎಸ್ ಕಾರ್ಯಕರ್ತರು ಹಾಡಿನ ಸೌಂಡ್​ ಅನ್ನು ಕಡಿಮೆ ಮಾಡಲು ನಿರಾಕರಿಸಿದರು'' ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಆರೋಪ ಮಾಡಿದ್ದಾರೆ. ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಕಾಗಜನಗರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು. ಘಟನೆಗೆ ಬಿಆರ್​ಎಸ್ ಶಾಸಕ ಕೋನೇರು ಕೋನಪ್ಪ ಕಾರಣ ಎಂದು ಆರೋಪಿಸಿದ್ದಾರೆ.

ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಮಾಜಿ ಅಧಿಕಾರಿ ಪ್ರವೀಣ್ ಕುಮಾರ್ ಅವರು ಚುನಾವಣೆಯಲ್ಲಿ ಸಿರ್ಪುರ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕುಮಾರ್ ರಾಜಕೀಯ ಪ್ರವೇಶಿಸಲು 2021ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ಅವರು ಬಿಎಸ್ಪಿಗೆ ಸೇರಿ ರಾಜ್ಯಾಧ್ಯಕ್ಷರಾದರು. ಬಿಎಸ್‌ಪಿ ಎಲ್ಲಾ 119 ವಿಧಾನಸಭೆ ಕ್ಷೇತ್ರಗಳಲ್ಲೂ ಸ್ಪರ್ಧಿಸುತ್ತಿದೆ.

4,798 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ: ತೆಲಂಗಾಣ ವಿಧಾನಸಭೆಗೆ ನ.30ರಂದು ಜರುಗಲಿರುವ ಚುನಾವಣೆಗೆ 4,798 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 119 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ನ.10 ರಂದು ಕೊನೆಯ ದಿನವಾಗಿತ್ತು. ಚುನಾವಣಾ ಅಧಿಕಾರಿಗಳು ಒಟ್ಟು 5,716 ಸೆಟ್ ನಾಮಪತ್ರಗಳನ್ನು ಸ್ವೀಕಾರ ಮಾಡಿದ್ದಾರೆ. ಈ ಪೈಕಿ ನಾಮಪತ್ರ ಸಲ್ಲಿಸಿದವರಲ್ಲಿ ಬಹುತೇಕ ಅಭ್ಯರ್ಥಿಗಳು ಪಕ್ಷೇತರರಾಗಿದ್ದಾರೆ.

ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ಪ್ರಕಾರ, ಕೊನೆಯ ದಿನದಂದು 2,324 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಆ ದಿನ ಒಟ್ಟು 2,768 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ. ಇಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಬೋಟ್​ನಿಂದ ಆಯತಪ್ಪಿ ಬಿದ್ದ ಮೀನುಗಾರ: 43 ಗಂಟೆ ಸಮುದ್ರದಲ್ಲಿ ಸೆಣಸಾಟ ನಡೆಸಿ ಬದುಕಿದ ಭೂಪ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.