ETV Bharat / bharat

ಇಸ್ಲಾಂ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದ ಪೂಜಾರಿಯ ಬರ್ಬರ ಹತ್ಯೆ - ಪ್ಲಾಸ್ಟಿಕ್ ಚೀಲಗಳಲ್ಲಿ ಮೃತದೇಹ ತುಂಬಿದ್ದ ಹಂತಕರು

ರಾಜಸ್ಥಾನದಲ್ಲಿ ದೇವಸ್ಥಾನದ ಅರ್ಚಕರೊಬ್ಬರನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿ, ನಾಲ್ಕು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ಎಸೆಯಲಾಗಿದೆ.

brutal-murder-of-priest-who-converted-to-hinduism-in-rajasthan
ಇಸ್ಲಾಂ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದ ಪೂಜಾರಿಯ ಬರ್ಬರ ಹತ್ಯೆ
author img

By

Published : Dec 21, 2022, 10:42 PM IST

ಧೋಲ್‌ಪುರ (ರಾಜಸ್ಥಾನ): ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮವನ್ನು ಸ್ವೀಕರಿಸಿದ್ದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿರುವ ಭೀಕರ ಘಟನೆ ರಾಜಸ್ಥಾನದ ಧೋಲ್​ಪುರ ಜಿಲ್ಲೆಯಲ್ಲಿ ನಡೆದಿದೆ.

ಭೀಮಗಢದ ನಿವಾಸಿ ವಹಾಬುದ್ದೀನ್ ಖಾನ್ (60) ಎಂಬಾತನೇ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಿಂದೂ ಧರ್ಮವನ್ನು ಸ್ವೀಕರಿಸಿದ್ದ ಖಾನ್​ ಕಳೆದ ಹತ್ತು ವರ್ಷಗಳಿಂದ ಇಲ್ಲಿನ ತೋಂಟರಿ ಗ್ರಾಮದ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು. ಆದರೆ, ಮಂಗಳವಾರ ರಾತ್ರಿ ಖಾನ್‌ ಅವರನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿ, ನಾಲ್ಕು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ ಪಾರ್ವತಿ ನದಿಯ ದಡದ ಪೊದೆಗಳಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅರ್ಚಕನ ಕೊಲೆ ಸುದ್ದಿ ತಿಳಿದು ಪಾರ್ವತಿ ನದಿಯ ದಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅಲ್ಲದೇ, ಘಟನೆಯ ನಂತರ ಸಮೀಪದ ದೇವಸ್ಥಾನದಲ್ಲಿ ತಂಗಿದ್ದ ಮೂವರು ಸಾಧುಗಳು ಕಾಣೆಯಾಗಿದ್ದಾರೆ. ಈ ಕೊಲೆ ಪ್ರಕರಣ ಭೇದಿಸಲು ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ಜೊತೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಈಗಾಗಲೇ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಕಾಂಚನಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಹೇಮರಾಜ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಹೆಚ್ಚು ಅಂಕದ ಆಮಿಷವೊಡ್ಡಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಾಧ್ಯಾಪಕ, ವಿದ್ಯಾರ್ಥಿ ವಿರುದ್ಧ ಕೇಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.