ETV Bharat / bharat

ದೇಶದ ಗಡಿಯೊಳಗೆ ನುಗ್ಗಲು 135 ಉಗ್ರರ ಸಂಚು.. ಗಣರಾಜ್ಯೋತ್ಸವ ಹಿನ್ನೆಲೆ ಬೆದರಿಕೆ ಕರೆ, ಸೇನೆ ಹೈಅಲರ್ಟ್​ - BSF on high alert

BSF on high alert : ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಗಡಿಯಲ್ಲಿ ಭಯೋತ್ಪಾದಕರು ನುಸುಳಿ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ ದಟ್ಟವಾಗಿರುವ ಕಾರಣ ಸೇನೆ ಪಡೆ ಹದ್ದಿನ ಕಣ್ಣಿಟ್ಟಿದೆ.

BSF on high alert
BSF on high alert
author img

By

Published : Jan 24, 2022, 4:04 PM IST

ಶ್ರೀನಗರ(ಜಮ್ಮು-ಕಾಶ್ಮೀರ): ದೇಶಾದ್ಯಂತ ಗಣರಾಜ್ಯೋತ್ಸವ ಆಚರಣೆಗೆ ಈಗಾಗಲೇ ಎಲ್ಲ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರಿಗೆ ಜೀವ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ, ಜಮ್ಮು-ಕಾಶ್ಮೀರ ಗಡಿಯಲ್ಲಿ ಬಿಎಸ್​ಎಫ್​ ಹದ್ದಿನ ಕಣ್ಣಿಟ್ಟಿದೆ.

ಇದಕ್ಕೆ ಸಂಬಂಧಿಸಿದಂತೆ ಭದ್ರತಾ ಪಡೆ ಇನ್ಸ್​ಪೆಕ್ಟರ್​​ ಡಿ.ಕೆ ಬೂರಾ ಮಾಹಿತಿ ಹಂಚಿಕೊಂಡಿದ್ದು, ಗಣರಾಜ್ಯೋತ್ಸವದಂದು ಕೆಲವೊಂದು ಭಯೋತ್ಪಾದಕ ಸಂಘಟನೆಗಳಿಂದ ಜೀವ ಬೆದರಿಕೆ ಇರುವ ಕಾರಣ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಮ್ಮು-ಕಾಶ್ಮೀರ ಅಂತಾರಾಷ್ಟ್ರೀಯ ಗಡಿಯಲ್ಲಿ ಈಗಾಗಲೇ ನಿಗಾ ವಹಿಸಲಾಗಿದ್ದು, ಮುಂದಿನ ಎರಡು ವಾರಗಳ ಕಾಲ ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದೇವೆ. ಕಣ್ಗಾವಲು ಉಪಕರಣಗಳ ಮೂಲಕ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.

ಕಾಶ್ಮೀರ ವಿಭಾಗದ ಇನ್ಸ್​ಪೆಕ್ಟರ್​​ ಜನರಲ್​​ ರಾಜಾ ಬಾಬು ಸಿಂಗ್ ಮಾಹಿತಿ

ಇದನ್ನೂ ಓದಿರಿ: ಪರೀಕ್ಷೆ ಬರೆಯಲು ತೆರಳಿದ್ದಾಗ ಮಗುವಿಗೆ ಜನ್ಮ ನೀಡಿದ ಗರ್ಭಿಣಿ.. ಶಿಶುವಿಗೆ 'TET' ಎಂದು ನಾಮಕರಣ!

ಗಡಿಯೊಳಗೆ ನುಗ್ಗಲು 104-135 ಉಗ್ರರು ಸಂಚು: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಗಡಿಯೊಳಗೆ ನುಗ್ಗಲು 104 ರಿಂದ 135 ಉಗ್ರರು ಸಂಚು ರೂಪಿಸಿದ್ದಾರೆಂದು ಗಡಿ ಭದ್ರತಾ ಪಡೆ ಕಾಶ್ಮೀರ ವಿಭಾಗದ ಇನ್ಸ್​ಪೆಕ್ಟರ್​​ ಜನರಲ್​​ ರಾಜಾ ಬಾಬು ಸಿಂಗ್​​ ತಿಳಿಸಿದ್ದಾರೆ. ಶ್ರೀನಗರದ ಬಿಎಸ್​ಎಫ್​ ಪ್ರಧಾನ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ವಾರ್ಷಿಕ ಸಮ್ಮೇಳನದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. 2021ರಿಂದಲೂ ಕಣಿವೆ ನಾಡಿನಲ್ಲಿ ಶಾಂತಿ ನೆಲೆಸಿದ್ದು, ಇದೀಗ ಉಗ್ರರು ಗಡಿಯೊಳಗೆ ನುಗ್ಗಲು ಯೋಜನೆ ರೂಪಿಸಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ ವರ್ಷದ ಫೆಬ್ರವರಿಯಲ್ಲಿ ಕದನ ವಿರಾಮ ಒಪ್ಪಂದದ ನಂತರ ಗಡಿ ಪ್ರದೇಶದಲ್ಲಿ ಶಾಂತಿ ನೆಲೆಸಿದ್ದು, ಇದರ ಹೊರತಾಗಿ ಕೂಡ 104 ರಿಂದ 135 ಉಗ್ರರು ಗಡಿಯೊಳಗೆ ನುಸುಳಲು ಯೋಜನೆ ಹಾಕಿಕೊಂಡಿದ್ದಾರೆ ಎಂದು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿದೆ ಎಂದರು.

ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಸ್ಫೋಟಕ ವಸ್ತು ಪತ್ತೆಯಾದ ನಂತರ ದೆಹಲಿಯ ಪ್ರಮುಖ ಸ್ಥಳಗಳಲ್ಲೂ ಪೊಲೀಸರು, ಯೋಧರು ಹೆಚ್ಚಿನ ನಿಗಾ ವಹಿಸಿದ್ದಾರೆ.

ಜಾಹೀರಾತು- ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.