ETV Bharat / bharat

ರಾಜಸ್ಥಾನದಲ್ಲಿ ಇಬ್ಬರು ಪಾಕಿಸ್ತಾನಿ ಒಳನುಸುಳುಕೋರರ ಹೊಡೆದುರುಳಿಸಿದ ಬಿಎಸ್‌ಎಫ್ - ರಾಜಸ್ಥಾನದ ಬಾರ್ಮರ್ ಜಿಲ್ಲೆ

ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಬಾರ್ಮರ್ವಾಲಾ ಚೆಕ್ ಪೋಸ್ಟ್ ಸಮೀಪ ಇಬ್ಬರು ಪಾಕಿಸ್ತಾನಿ ಒಳನುಸುಳುಕೋರರನ್ನು ಬಿಎಸ್‌ಎಫ್ ಯೋಧರು ಸದೆಬಡೆದಿದ್ದಾರೆ.

bsf-killed-two-pakistani-infiltrators- rajasthan
ರಾಜಸ್ಥಾನದ ಗಡಿಯಲ್ಲಿ ಇಬ್ಬರು ಪಾಕಿಸ್ತಾನಿ ಒಳನುಸುಳುಕೋರರ ಹೊಡೆದುರುಳಿಸಿದ ಬಿಎಸ್‌ಎಫ್
author img

By

Published : May 2, 2023, 2:26 PM IST

ಬಾರ್ಮರ್ (ರಾಜಸ್ಥಾನ): ಭಾರತ ಮತ್ತು ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಗೆ ಹೊಂದಿಕೊಂಡಿರುವ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಮಹತ್ವದ ಕಾರ್ಯಾಚರಣೆ ಕೈಗೊಂಡು, ಪಾಕಿಸ್ತಾನದ ಒಳನುಸುಳುವಿಕೆಯನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಇಲ್ಲಿನ ಗದ್ರಾರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಇಬ್ಬರು ಪಾಕಿಸ್ತಾನಿ ನುಸುಳುಕೋರರನ್ನು ಬಿಎಸ್‌ಎಫ್ ಯೋಧರು ಹೊಡೆದುರುಳಿಸಿದರು.

ಗಡಿ ಭಾಗದಲ್ಲಿರುವ ಬಾರ್ಮರ್ವಾಲಾ ಚೆಕ್ ಪೋಸ್ಟ್ ಬಳಿ ಭಾರತವನ್ನು ಪ್ರವೇಶಿಸಲು ಪಾಕಿಸ್ತಾನಿ ನುಸುಳುಕೋರರು ಪ್ರಯತ್ನಿಸುತ್ತಿದ್ದರು. ಈ ಮಾಹಿತಿ ಅರಿತ ಬಿಎಸ್‌ಎಫ್ ಯೋಧರು, ಪೊಲೀಸ್ ಉನ್ನತ ಅಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ನುಸುಳುಕೋರರಿಗೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೂ, ಗಡಿಯೊಳಗೆ ಒಳನುಗ್ಗಿದ ಇಬ್ಬರ ಮೇಲೂ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಪಾಲ್ ಸಿಂಗ್ ಮಾಹಿತಿ ನೀಡಿದ್ದು, ಗಡಿಯಲ್ಲಿ ಒಳನುಸುಳುವಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಇದೇ ವೇಳೆ ನುಸುಳುಕೋರರು ಅಕ್ರಮ ಮಾದಕ ವಸ್ತು ಸಾಗಾಟ ಮಾಡುತ್ತಿರುವ ಕುರಿತ ಮಾಹಿತಿ ಸಹ ಸಿಕ್ಕಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಖಚಿತವಾಗಿಲ್ಲ. ಹೆಚ್ಚಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಳೆದ ಡಿಸೆಂಬರ್​ನಲ್ಲೂ ಪಾಕಿಸ್ತಾನಿ ನುಸುಳುಕೋರನೊಬ್ಬನನ್ನು ಬಿಎಸ್​ಎಫ್ ಯೋಧರು ಹೊಡೆದುರುಳಿಸಿದ್ದರು. ರಾಜಸ್ಥಾನದ ಶ್ರೀಗಂಗಾನಗರದ ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಗ್ಗಲು ಯತ್ನಿಸುತ್ತಿದ್ದಾಗ ಹತ್ಯೆ ಮಾಡಲಾಗಿತ್ತು. ಈ ವೇಳೆ ಕೊಲೆಯಾದ ವ್ಯಕ್ತಿ ಬಳಿ ಬೆಂಕಿಪೆಟ್ಟಿಗೆ, ಸಿಗರೇಟ್, ಪಾಕಿಸ್ತಾನಿ ಕರೆನ್ಸಿ ಮತ್ತು ಹಗ್ಗ ಪತ್ತೆಯಾಗಿತ್ತು.

ಇದನ್ನೂ ಓದಿ: ರೋಹಿಣಿ ಕೋರ್ಟ್​ ಶೂಟೌಟ್​: ತಿಹಾರ್​ ಜೈಲಿನಲ್ಲಿ ಟಿಲ್ಲು ಗ್ಯಾಂಗ್​ ಸದಸ್ಯನ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.