ETV Bharat / bharat

ಸರ್ವೀಸ್​ ರೈಫಲ್​ನಿಂದ ಗುಂಡು ಹಾರಿಸಿಕೊಂಡು ಬಿಎಸ್​ಎಫ್​ ಯೋಧ ಆತ್ಮಹತ್ಯೆ - etv bharat karnataka

BSF soldier committed suicide: ಬಿಎಸ್‌ಎಫ್ ಯೋಧನೊಬ್ಬ ತನ್ನ ಸರ್ವಿಸ್​ ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.

bsf-soldier-committed-suicide-by-shooting-himself-in-cooch-behar
BSF soldier committed suicide: ಸರ್ವಿಸ್​ ರೈಫಲ್​ನಿಂದ ಗುಂಡು ಹಾರಿಸಿಕೊಂಡು ಬಿಎಸ್​ಎಫ್​ ಯೋಧ ಆತ್ಮಹತ್ಯೆ
author img

By ETV Bharat Karnataka Team

Published : Sep 8, 2023, 8:41 PM IST

ಕೂಚ್ ಬೆಹಾರ್( ಪಶ್ಚಿಮಬಂಗಾಳ): ಭಾರತ- ಬಾಂಗ್ಲಾದೇಶದ ಗಡಿಯಲ್ಲಿರುವ ಸಿತಾಲ್ಕುಚಿ ಬ್ಲಾಕ್‌ನಲ್ಲಿ ಶುಕ್ರವಾರ ಮುಂಜಾನೆ 4 ಗಂಟೆ ಸುಮಾರಿಗೆ ಬಿಎಸ್‌ಎಫ್ ಯೋಧನೊಬ್ಬ ತನ್ನ ಸರ್ವೀಸ್​ ರೈಫಲ್​ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಲ್ಲಬೋತುಲ ನಾರಾಯಣ ಸ್ವಾಮಿ ಆತ್ಮಹತ್ಯೆಗೆ ಶರಣಾದ ಯೋಧ. ಸೀತಾಲ್ಕುಚಿಯ ಗಾಡೋಪೋಟಾ ಗ್ರಾಮದ ಅಮೃತ್ ಕ್ಯಾಂಪ್​ನಲ್ಲಿ ಈ ಘಟನೆ ನಡೆದಿದೆ.

ಘಟನೆ ನಡೆದ ತಕ್ಷಣ ಇತರ ಬಿಎಸ್ಎಫ್ ಯೋಧರು ಅವರನ್ನು ಸಿತಾಲ್ಕುಚಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಯೋಧ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕೂಚ್ ಬೆಹರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ, ಯೋಧ ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಕೂಚ್ ಬೆಹಾರ್​ನ ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಸಿತಾಲ್ಕುಚಿ ಬ್ಲಾಕ್​ನ ಗಡೋಪೊಟಾ ಗ್ರಾಮದ ಅಮೃತ್ ಕ್ಯಾಂಪ್​ನಲ್ಲಿ ಶುಕ್ರವಾರ ಮುಂಜಾನೆ ಇದ್ದಕ್ಕಿದ್ದಂತೆ ಗುಂಡಿನ ಸದ್ದು ಕೇಳಿಸಿದೆ.

ಬಿಎಸ್​ಎಫ್ ಮೂಲಗಳ ಪ್ರಕಾರ, ಯೋಧ ನಲ್ಲಬೋತುಲಾ ನಾರಾಯಣ ಸ್ವಾಮಿ ಅವರು ಕರ್ತವ್ಯದಲ್ಲಿದ್ದಾಗ ತಮ್ಮ ಸರ್ವಿಸ್​ ರೈಫಲ್​ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯೋಧನಿಗೆ ಕೆಲವು ಕೌಟುಂಬಿಕ ಸಮಸ್ಯೆಗಳಿದ್ದವು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅದಕ್ಕಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿಸಿದ್ದಾರೆ. ಯೋಧನ ಆತ್ಮಹತ್ಯೆಗೆ ನಿಜವಾದ ಕಾರಣ ಏನು ಎಂಬುದು ತನಿಖೆಯ ನಂತರ ತಿಳಿಯುತ್ತದೆ ಎಂದು ಶಿತಾಲ್ಕುಚಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಮೃತುಂಜಯ್ ಚಕ್ರವರ್ತಿ ಹೇಳಿದ್ದಾರೆ.

ಸದ್ಯಕ್ಕೆ ಬಿಎಸ್ಎಫ್ ಯೋಧನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಠಭಂಗದ ಎಂಜೆಎನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತನಿಖಾಧಿಕಾರಿ ತಿಳಿಸಿದ್ದಾರೆ. ಇನ್ನು ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್ಎಫ್ ಯೋಧ ನಲ್ಲಬೋತುಲಾ ನಾರಾಯಣ ಸ್ವಾಮಿ ಅವರ ಸಹೋದ್ಯೋಗಿಗಳ ವಿಚಾರಣೆ ಮಾತನಾಡುತ್ತಿದ್ದಾರೆ. ಅವರು ಇತ್ತೀಚೆಗೆ ಯಾವುದಾದರೂ ವಿಷಯದ ಬಗ್ಗೆ ಒತ್ತಡಕ್ಕೊಳಗಾಗಿದ್ದರೆ? ಅಥವಾ ಕೌಟುಂಬಿಕ ಸಮಸ್ಯೆಗಳು ಇತ್ತೇ? ಎಂದು ಪ್ರಶ್ನಿಸುತ್ತಿದ್ದಾರೆ. ಸಂಪೂರ್ಣ ತನಿಖೆ ಆರಂಭಿಕ ಹಂತದಲ್ಲಿದೆ ಎಂದು ಕೂಚ್ ಬೆಹರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ವರ್ಮಾ ಹೇಳಿದ್ದಾರೆ. ಆಂಧ್ರಪ್ರದೇಶದಲ್ಲಿರುವ ಮೃತ ಯೋಧನ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಸಿಆರ್‌ಪಿಎಫ್ ಕಾನ್​ಸ್ಟೇಬಲ್​ ಹತ್ಯೆ: ಅಸ್ಸೋಂನ ತಿನ್ಸುಕಿಯಾ ಜಿಲ್ಲೆಯ ಬರ್ದುಮ್ಸಾ ಪ್ರದೇಶದಲ್ಲಿ ಇತ್ತೀಚಿಗೆ ಇಲ್ಲಿನ ಮಾರುಕಟ್ಟೆ ಪ್ರದೇಶದಲ್ಲಿ ಸಿಆರ್‌ಪಿಎಫ್ ಕಾನ್​ಸ್ಟೇಬಲ್​​ ಓರ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದರು. ಸರ್ಕಾರಿ ನೌಕರನ ಕುತ್ತಿಗೆಗೆ ಹರಿತವಾದ ಆಯುಧದಿಂದ ಇರಿದು ಹಲ್ಲೆ ನಡೆಸಲಾಗಿತ್ತು. ಮೂಲಗಳು ನೀಡಿದ ಮಾಹಿತಿ ಪ್ರಕಾರ, ಸಿಆರ್‌ಪಿಎಫ್ ಕಾನ್​ಸ್ಟೇಬಲ್​ ಸಿವಿಲ್ ಡ್ರೆಸ್‌ನಲ್ಲಿದ್ದು, ಬರ್ದುಮ್ಸಾದಲ್ಲಿರುವ ಅಸ್ಸೋಂ - ಅರುಣಾಚಲ ಪ್ರದೇಶದ ಗಡಿ ಬಳಿಯ ಮಾರುಕಟ್ಟೆಗೆ ಹೋಗುತ್ತಿದ್ದರು. ಸಂಜೆ 5 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬಳಿಕ ಪರಾರಿಯಾಗಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಗೋಮಾಂಸ ತಿನ್ನಿಸಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.