ಶ್ರೀನಗರ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ.
ಇಲ್ಲಿನ ವಾಟರ್ಹೈಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಅಡಗಿ ಕುಳಿತಿದ್ದ ಭಯೋತ್ಪಾದಕರು ಗುಂಡಿನ ದಾಳಿಗೆ ಮುಂದಾಗಿದ್ದಾರೆ. ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳು ಮೂವರನ್ನು ಸದೆಬಡಿಯುವಲ್ಲಿ ಯಶಸ್ವಿಯಾದರು. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ: ವ್ಯಕ್ತಿಯ ಕಣ್ಣಿನಿಂದ 6 ಇಂಚಿನ ಚಾಕು ಹೊರ ತೆಗೆದ ವೈದ್ಯರು!