ನವದೆಹಲಿ: 'ಭಾರತ ಸರ್ಕಾರ, ಸೇತುವೆಗಳನ್ನು ಕಟ್ಟಿ, ಗೋಡೆಗಳನ್ನು ಅಲ್ಲ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ರೈತ ಪ್ರತಿಭಟನೆ ತೀವ್ರವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ಈ ರೀತಿಯಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
-
GOI,
— Rahul Gandhi (@RahulGandhi) February 2, 2021 " class="align-text-top noRightClick twitterSection" data="
Build bridges, not walls! pic.twitter.com/C7gXKsUJAi
">GOI,
— Rahul Gandhi (@RahulGandhi) February 2, 2021
Build bridges, not walls! pic.twitter.com/C7gXKsUJAiGOI,
— Rahul Gandhi (@RahulGandhi) February 2, 2021
Build bridges, not walls! pic.twitter.com/C7gXKsUJAi
ನವದೆಹಲಿಯ ಟಿಕ್ರಿ ಮತ್ತು ಘಾಜಿಪುರ ಗಡಿಗಳಲ್ಲಿ ಪೊಲೀಸರು ಬ್ಯಾರಿಕೇಡ್, ಮುಳ್ಳುತಂತಿ, ಸಿಮೆಂಟ್ ಮೂಲಕ ತಡೆಗೋಡೆಗಳ ನಿರ್ಮಾಣ ಮಾಡುವ ಮೂಲಕ ಪ್ರತಿಭಟನಾ ನಿರತ ರೈತರನ್ನು ನಿಯಂತ್ರಿಸಲು ಮುಂದಾಗಿದೆ ಎಂದು ಆರೋಪಿಸಿ ರಾಹುಲ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಕಳೆದ 8 ತಿಂಗಳಿಂದ ಇದೇ ಮೊದಲ ಬಾರಿ ಕಡಿಮೆ ಕೋವಿಡ್ ಪ್ರಕರಣಗಳು ಪತ್ತೆ
ಹಿಂದಿನ ವಾರ ಸುದ್ದಿಗೋಷ್ಟಿ ನಡೆಸಿದ್ದ ರಾಹುಲ್ ಗಾಂಧಿ, ಸರ್ಕಾರ ರೈತರನ್ನು ಬೆದರಿಸುವ, ವಂಚಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದರು. ಇದರ ಜೊತೆಗೆ ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದರು. ಇದೇ ವೇಳೆ ರೈತರ ಪ್ರತಿಭಟನೆಯನ್ನು ಬಲವಂತವಾಗಿ ನಿಲ್ಲಿಸಲು ಯತ್ನಿಸುವುದು ತಪ್ಪು ಎಂದು ಅವರು ಅಭಿಪ್ರಾಯಪಟ್ಟಿದ್ದರು.
ಮೂರು ದಿನಗಳಿಂದ ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಾಜಿಪುರ, ಟಿಕ್ರಿ ಮತ್ತು ಸಿಂಘು ಗಡಿಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಆದರೂ ಕೂಡಾ ರೈತರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.
ದೆಹಲಿ ಪೊಲೀಸರೂ ಕೂಡಾ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಅಕ್ಷರಧಾಮದ ಬಳಿ ರಸ್ತೆಗಳನ್ನು ಬಂದ್ ಮಾಡಿದ್ದಾರೆ. ಜೊತೆಗೆ ದೆಹಲಿ ಮತ್ತು ಘಾಜಿಯಾಬಾದ್ ಕಡೆಗೆ ತೆರಳುವ ನ್ಯಾಷನಲ್ ಹೈವೇ-24ರಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ.