ETV Bharat / bharat

ಅಗ್ನಿ ಅವಘಡ: ನ್ಯೂ ಬರಾಕ್​ಪೋರ್​ನಲ್ಲಿ ನಾಲ್ವರ ಸಜೀವ ದಹನ - new barrackpore fire

ಬೆಂಕಿಯು ವ್ಯಾಪಕವಾಗಿ ಹರಡಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಖಾನೆಯೊಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಡ್ರೋನ್​ ಮೂಲಕ ನಾಲ್ವರು ಕಾರ್ಮಿಕರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಅವರ ಕುಟುಂಬಸ್ಥರನ್ನು ಸ್ಥಳಕ್ಕೆ ಕರೆಸಲಾಗಿದ್ದು, ಶವಗಳ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

new barrackpore
new barrackpore
author img

By

Published : May 29, 2021, 4:33 PM IST

Updated : May 29, 2021, 4:45 PM IST

ನ್ಯೂ ಬರಾಕ್​ಪೋರ್ (ಪಶ್ಚಿಮ ಬಂಗಾಳ) : ಮೇ 26 ರಂದು ಕಾರ್ಖಾನೆಯೊಂದರಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಇಂದು ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ಅಮಿತ್ ಸೇನ್, ಸುಬ್ರತಾ ಘೋಷ್, ತನ್ಮಯ್ ಘೋಷ್ ಮತ್ತು ಸ್ವರೂಪ್ ಘೋಷ್ ಎಂದು ಗುರುತಿಸಲಾಗಿದೆ.

ಬೆಂಕಿಯು ವ್ಯಾಪಕವಾಗಿ ಹರಡಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಖಾನೆಯೊಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಡ್ರೋನ್​ ಮೂಲಕ ನಾಲ್ವರು ಕಾರ್ಮಿಕರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಅವರ ಕುಟುಂಬಸ್ಥರನ್ನು ಸ್ಥಳಕ್ಕೆ ಕರೆಸಲಾಗಿದ್ದು, ಶವಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ದೇಣಿಗೆ ಕೊಟ್ಟರೆ ತೆರಿಗೆ ವಿನಾಯಿತಿ

ಮೇ 26 ರ ಮುಂಜಾನೆ 3 ಗಂಟೆ ಸುಮಾರಿಗೆ ನ್ಯೂ ಬರಾಕ್​ಪೋರ್​ನ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಮೊದಲಿಗೆ ಮೂರನೇ ಮಹಡಿಯ ಒಂದು ಭಾಗದಲ್ಲಿ ಕಾಣಿಸಿಕೊಂಡ ಬೆಂಕಿ, ಇಡೀ ಕಟ್ಟಡಕ್ಕೆ ವ್ಯಾಪಿಸಿತ್ತು.

Last Updated : May 29, 2021, 4:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.