ಬಿಹಾರ/ಪೂರ್ಣಿಯಾ: ಚಲಿಸುತ್ತಿದ್ದ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರೆಲ್ಲರನ್ನೂ ಸುರಕ್ಷಿತವಾಗಿ ಬಸ್ನಿಂದ ಹೊರಗಿಳಿಸಲಾಗಿದೆ.
ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮೇಲ್ಸೇತುವೆಯಲ್ಲಿ ಇದ್ದಕ್ಕಿದ್ದಂತೆ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿದ್ದ ಪ್ರಯಾಣಿಕರು ತಮ್ಮ ಜೀವವನ್ನು ಉಳಿಸಿಕೊಳ್ಳುವ ಆತುರದಲ್ಲಿ ಬಸ್ನಿಂದ ಇಳಿದರು. ಬಸ್ಸಿನೊಳಗೆ ಎಷ್ಟು ಜನ ಇದ್ದರು ಎಂಬ ಬಗ್ಗೆ ತಿಳಿದು ಬಂದಿಲ್ಲ.
ಬೆಂಕಿ ಕಾಣಿಸಿಕೊಳ್ಳು ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಎಸಿ ವೈರ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಘಟನೆ ನಡೆದಿದೆ ಎಂದು ಊಹಿಸಲಾಗಿದೆ. ಈ ಬೆಂಕಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಯಿತು. ಮಾಹಿತಿ ನೀಡಿದರೂ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿಲ್ಲ ಎಂದು ಹೇಳಲಾಗಿದೆ.