ರಾಜ್‌ಕೋಟ್(ಗುಜರಾತ್): ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪಘಾತಗಳಿಂದ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ವಾಹನ ಚಾಲಕರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.
ಮುನ್ಸಿಪಲ್ ಕಾರ್ಪೊರೇಷನ್ನ ಸಿಟಿ ಬಸ್ ಚಾಲಕರು ಅಜಾಗರೂಕತೆಯಿಂದ ಬಸ್ ಓಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಆನಂದ್ ಬಾಂಗ್ಲಾ ಚೌಕ್ ಬಳಿ ಸಿಟಿ ಬಸ್ ಚಾಲಕ ರಿಕ್ಷಾ ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್ ಕೂಡ ಆತನ ಮೇಲೆ ಹರಿದಿದೆ. ಘಟನೆಯಲ್ಲಿ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಬಸ್ ಚಾಲಕನ ನಿರ್ಲಕ್ಷ್ಯ ಬಯಲಾಗಿದೆ. ಘಟನೆ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ವಿಧಿವಿಧಾನಗಳ ಮೂಲಕ ನೆರವೇರಿದ 'ಈಟಿವಿ ಭಾರತ' ಪತ್ರಕರ್ತೆ ನಿವೇದಿತಾ ಸೂರಜ್ ಅಂತ್ಯಕ್ರಿಯೆ