ಉತ್ತರಕಾಶಿ (ಉತ್ತರಾಖಂಡ ): 30 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಯಮುನೋತ್ರಿ ಹೆದ್ದಾರಿಯ ದಮ್ತಾ ಬಳಿ ಸುಮಾರು 200 ಮೀಟರ್ ಆಳದ ಕಮರಿಗೆ ಬಿದ್ದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಎಲ್ಲಾ ಪ್ರಯಾಣಿಕರು ಮಧ್ಯಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ.
ಇತ್ತೀಚಿನ ವರದಿಗಳ ಪ್ರಕಾರ ಇದುವರೆಗೆ 26 ಮೃತದೇಹಗಳು ಪತ್ತೆಯಾಗಿವೆ. ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಉತ್ತರಾಖಂಡದ ಸ್ಥಳೀಯ ಆಡಳಿತದ ಪ್ರಕಾರ 26 ಯಾತ್ರಿಕರು ಸಾವನ್ನಪ್ಪಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಮತ್ತು ಗಾಯಗೊಂಡವರಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಉತ್ತರಾಖಂಡದಲ್ಲಿ ಸಂಭವಿಸಿದ ಬಸ್ ಅಪಘಾತವು ತುಂಬಾ ನೋವಿನಿಂದ ಕೂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಧೈರ್ಯ ಹೇಳುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸ್ಥಳದಲ್ಲೇ ಸಾಧ್ಯವಿರುವ ಎಲ್ಲ ಸಹಾಯದಲ್ಲಿ ತೊಡಗಿಸಿಕೊಂಡಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ PMNRF ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೊಷಣೆ ಮಾಡಲಾಗಿದೆ.