ETV Bharat / bharat

ಬಸ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಟ್ರಕ್: ಸ್ಥಳದಲ್ಲೇ ಎಂಟು ಜನರ ದರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ - ಅಂಬಾಲಾ ಪೊಲೀಸ್

ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ಶುಕ್ರವಾರ ಬಸ್‌ ಹಾಗೂ ಟ್ರಕ್​ ನಡೆವು ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ಹಾಗೂ ಅವರ ಸಂಬಂಧಿಕರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಂಬಲಾ ಪೊಲೀಸರು ತಿಳಿಸಿದರು.

bus and truck collision in ambala
ಬಸ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಟ್ರಕ್
author img

By

Published : Mar 3, 2023, 10:11 PM IST

ಅಂಬಾಲಾ (ಹರಿಯಾಣ): ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ಶುಕ್ರವಾರ ಬಸ್​ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜವರಾಯನ ಅಟ್ಟಹಾಸಕ್ಕೆ ಎಂಟು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಿಂಬದಿಯಿಂದ ಡಿಕ್ಕಿ ಹೊಡೆದ ಟ್ರಕ್: ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. ಉತ್ತರ ಪ್ರದೇಶದ ಬರೇಲಿಯಿಂದ ಬರುತ್ತಿದ್ದ ಬಸ್ ಹಿಮಾಚಲ ಪ್ರದೇಶದ ಬಡ್ಡಿ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಅವರು ಬಹಿರಂಗಪಡಿಸಿದರು. ಬಸ್ ಶಹಜಾದ್‌ಪುರ ಬಳಿ ತಲುಪಿದಾಗ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

bus and truck collision in ambala
ಬಸ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಟ್ರಕ್ ಪಲ್ಟಿಯಾಗಿರುವುದು

ಅಂಬಾಲಾ ಪೊಲೀಸರು ಹೇಳಿದ್ದೇನು?: ಅಂಬಾಲಾ ಪೊಲೀಸ್ ಮೂಲಗಳ ಪ್ರಕಾರ, ಡಿಕ್ಕಿಯ ನಂತರ ಕಬ್ಬಿಣದ ವಸ್ತುಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಬಹುತೇಕರು ಬರೇಲಿಯ ಕಾರ್ಮಿಕರಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಮಗ್ರ ತನಿಖೆ ಆರಂಭ: ಪ್ರಕರಣದ ತನಿಖೆ ನಡೆಸುತ್ತಿರುವ ಅಂಬಾಲಾ ಪೊಲೀಸ್ ಅಧಿಕಾರಿಗಳಿಗೆ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಅವರ ಸಂಬಂಧಿಕರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಘಟನೆಯ ಕುರಿತು ಸಮಗ್ರವಾಗಿ ತನಿಖೆ ನಡೆಸಲಾಗುತ್ತಿದ್ದು, ಸುಳಿವುಗಳಿಗಾಗಿ ತನಿಖಾಧಿಕಾರಿಗಳು ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾರೇ ನಿರ್ಲಕ್ಷ್ಯ ತೋರಿದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಂದು ಪೊಲೀಸರು ಹೇಳಿದರು.

ಫರಿದಾಬಾದ್​​ನಲ್ಲೂ ಭೀಕರ ಅಪಘಾತ: ಗುರುವಾರ ತಡರಾತ್ರಿ ಫರಿದಾಬಾದ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಫರಿದಾಬಾದ್ - ಗುರುಗಾಂವ್ ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ವಾಹನ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಮಂದಿ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಪಲ್ವಾಲ್‌ನ ಕ್ಯಾಂಪ್ ಮತ್ತು ಜವಾಹರ್ ನಗರದ ನಿವಾಸಿಗಳಾದ ಪುನೀತ್​, ಜತಿನ್, ಆಕಾಶ್, ಸಂದೀಪ್, ಬಲ್ಜಿತ್ ಮತ್ತು ವಿಶಾಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲ ಯುವಕರು 18 ರಿಂದ 25 ವರ್ಷದವರು ಎಂದು ಹೇಳಲಾಗಿದೆ.

ಈ ಎಲ್ಲಾ ಯುವಕರು ಪಲ್ವಾಲ್ ನಿವಾಸಿಗಳು. ತಮ್ಮ ಸ್ನೇಹಿತ ಹುಟ್ಟುಹಬ್ಬ ಆಚರಿಸಲು ಕಾರಿನಲ್ಲಿ ಹೊರಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾರುತಿ ಆಲ್ಟೊ ಕಾರಿನಲ್ಲಿ ಗುರ್ಗಾಂವ್‌ನಿಂದ ಫರಿದಾಬಾದ್‌ಗೆ ಬರುತ್ತಿದ್ದಾಗ ಗ್ರಾಮದ ಪಾಲಿ ಬಳಿ ವೇಗವಾಗಿ ಬಂದ ಡಂಪರ್ ಅವರ ಕಾರಿಗೆ ಮುಂಭಾಗದಿಂದ ಡಿಕ್ಕಿ ಹೊಡೆದು. ಮುಖಾಮುಖಿ ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಡಂಪರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಅಪಘಾತದ ನಂತರ ಜಮಾಯಿಸಿದ ಜನರು ಎಲ್ಲ ಯುವಕರನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಖಚಿತ ಪಡಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರ ಮೃತದೇಹಗಳನ್ನು ಪಡೆದು ಮರಣೋತ್ತರ ಪರೀಕ್ಷೆಗಾಗಿ ಬಾದಶಾಖಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾದಶಾಖಾನ್ ಆಸ್ಪತ್ರೆಗೆ ಆಗಮಿಸಿದ ಮೃತ ಯುವಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮತ್ತೊಂದೆಡೆ ಹರಿಯಾಣದಲ್ಲಿ ಇಂದು ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಪಾಣಿಪತ್‌ನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಮೃತಪಟ್ಟು 16 ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ಫರಿದಾಬಾದ್‌ನಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿ ದುರ್ಮರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.