ETV Bharat / bharat

Cheating Case: ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ದಂಪತಿ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ ಉದ್ಯಮಿ - ಎಸ್‌ಎಫ್‌ಎಲ್ ಫಿಟ್‌ನೆಸ್ ಕಂಪನಿ

ಮುಂಬೈ ಮೂಲದ ಉದ್ಯಮಿಯೊಬ್ಬರು ಶಿಲ್ಪಾ-ಕುಂದ್ರಾ ದಂಪತಿ ವಿರುದ್ಧ ವಂಚನೆ ಆರೋಪ ಮಾಡಿದ್ದು, ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಲ್ಪಾ ಶೆಟ್ಟಿ - ರಾಜ್ ಕುಂದ್ರಾ
ಲ್ಪಾ ಶೆಟ್ಟಿ - ರಾಜ್ ಕುಂದ್ರಾ
author img

By

Published : Nov 14, 2021, 12:11 PM IST

ಮುಂಬೈ (ಮಹಾರಾಷ್ಟ್ರ): ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ (Shilpa Shetty) ಮತ್ತು ಅವರ ಪತಿ ಉದ್ಯಮಿ ರಾಜ್ ಕುಂದ್ರಾ (Raj Kundra) ವಿರುದ್ಧ ಒಂದರ ಮೇಲೊಂದು ಆರೋಪಗಳು ಕೇಳಿ ಬರುತ್ತಲೇ ಇದೆ. ಇದೀಗ ಈ ದಂಪತಿ 1.51 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಮುಂಬೈ ಮೂಲದ ಉದ್ಯಮಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ (Bandra Police station) ಶನಿವಾರ ನಿತಿನ್ ಬಾರೈ ಎಂಬ ಉದ್ಯಮಿಯು ಶಿಲ್ಪಾ-ಕುಂದ್ರಾ ದಂಪತಿ ಹಾಗೂ ಇತರರ ವಿರುದ್ಧ ಎಫ್‌ಐಆರ್ (FIR) ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.

ಶಿಲ್ಪಾ ಶೆಟ್ಟಿ
ರಾಜ್ ಕುಂದ್ರಾ - ಶಿಲ್ಪಾ ಶೆಟ್ಟಿ

ಇದನ್ನೂ ಓದಿ: ಅಶ್ಲೀಲ ವಿಡಿಯೋ ಚಿತ್ರೀಕರಣ ಕೇಸ್: ಜೈಲಿನಿಂದ ಉದ್ಯಮಿ ರಾಜ್​ಕುಂದ್ರಾ ರಿಲೀಸ್

2014ರ ಜುಲೈನಲ್ಲಿ ಎಸ್‌ಎಫ್‌ಎಲ್ ಫಿಟ್‌ನೆಸ್ ಕಂಪನಿಯ (SFL Fitness Company) ನಿರ್ದೇಶಕ ಕಾಶಿಫ್ ಖಾನ್, ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಮತ್ತು ಇತರರು ನನಗೆ ಪುಣೆ ಸುತ್ತಮುತ್ತ ಎರಡು ಸ್ಥಳಗಳಲ್ಲಿ ಜಿಮ್​ ಮತ್ತು ಸ್ಪಾ​(ಮಸಾಜ್) ಸೆಂಟರ್​ ತೆರೆದು ಲಾಭ ಗಳಿಸಬಹುದೆಂದು ನಂಬಿಸಿ ನನಗೆ 1.51 ಕೋಟಿ ರೂ. ಹಣ ಹೂಡಿಕೆ ಮಾಡುವಂತೆ ಕೇಳಿದ್ದರು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ಹಣ ಪಡೆದು ನನಗೆ ಮೋಸ ಮಾಡಿದ್ದಾರೆ. ಹಣವನ್ನು ಮರಳಿ ಕೇಳಿದಾಗ ಬೆದರಿಕೆಯೊಡ್ಡಿದ್ದಾರೆ ಎಂದು ದೂರಿ​ನಲ್ಲಿ ದೂರುದಾರ ನಿತಿನ್ ಬಾರೈ ಉಲ್ಲೇಖಿಸಿದ್ದಾರೆ.

ದೂರಿನ ಆಧಾರದ ಮೇಲೆ, ಬಾಂದ್ರಾ ಪೊಲೀಸರು 420 (ವಂಚನೆ), 120-ಬಿ (ಕ್ರಿಮಿನಲ್ ಪಿತೂರಿ), 506 (ಬೆದರಿಕೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ದಂಪತಿಯಿಂದ ಮಾನಸಿಕ ಕಿರುಕುಳ... 75 ಕೋಟಿ ರೂ. ಪರಿಹಾರ ಕೇಳಿದ ಶೆರ್ಲಿನ್​

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಡಿ ಜೈಲು ಸೇರಿದ್ದ ರಾಜ್ ಕುಂದ್ರಾ ಸೆ.21ರಂದು ಜಾಮೀನಿನ ಮೇಲೆ ಹೊರಬಂದಿದ್ದರು. ಅಷ್ಟೇ ಅಲ್ಲ, ಶಿಲ್ಪಾ-ಕುಂದ್ರಾ ದಂಪತಿ ವಿರುದ್ಧ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ದೌರ್ಜನ್ಯ ಆರೋಪ ಮಾಡಿ, ಮಾನನಷ್ಟ ಮೊಕದ್ದಮೆ ಕೂಡ ದಾಖಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.