ಕೂಚ್ ಬೆಹಾರ್(ಪಶ್ಚಿಮ ಬಂಗಾಳ): ಉದ್ಯಮಿಯೊಬ್ಬನನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದ್ದು, ಹೀಗಾಗಿ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಗುಂಡು ಹಾರಿಸಿ ಇಂದು ಬೆಳಗ್ಗೆ ಉದ್ಯಮಿ ಕೊಲೆ ಮಾಡಲಾಗಿದ್ದು, ಇದಾದ ಗಂಟೆ ಕಳೆದ್ರೂ ಸ್ಥಳಕ್ಕೆ ಪೊಲೀಸರು ಆಗಮಿಸಿದ ಕಾರಣ ಸ್ಥಳದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಸ್ಥಳೀಯರು ಆಕ್ರೋಶ ಹೊರಹಾಕಿದ್ದರು.
ರೋಡ್ನಲ್ಲಿ ಟೈರ್ ಸುಟ್ಟು ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದು, ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಖಾಕಿ ಪಡೆ ಮೇಲೆ ಕಲ್ಲು ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿದರು.
ಇದನ್ನೂ ಓದಿ: ಈ ಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದ ಆರ್ಬಿಐ
ಉದ್ಯಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.