ETV Bharat / bharat

ಬಿ.ವಿ.ಆರ್ ಸುಬ್ರಹ್ಮಣ್ಯಂ ನೀತಿ ಆಯೋಗದ ನೂತನ ಸಿಇಒ - Swachh Bharat Mission

ಮಾಜಿ ಐಎಎಸ್​ ಅಧಿಕಾರಿ ಬಿ.ವಿ.ಆರ್ ಸುಬ್ರಹ್ಮಣ್ಯಂ ಅವರನ್ನು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ.

ಬಿವಿಆರ್ ಸುಬ್ರಹ್ಮಣ್ಯಂ
ಬಿವಿಆರ್ ಸುಬ್ರಹ್ಮಣ್ಯಂ
author img

By

Published : Feb 20, 2023, 11:00 PM IST

ನವದೆಹಲಿ: ಕೇಂದ್ರ ಸರ್ಕಾರ ಸೋಮವಾರ ನಿವೃತ್ತ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಹ್ಮಣ್ಯಂ ಅವರನ್ನು ನೀತಿ ಆಯೋಗದ ನೂತನ ಸಿಇಒ ಆಗಿ ನೇಮಿಸಿದೆ. ಆಯೋಗದ ನೂತನ ಸಿಇಒ ಆಗಿ ಅವರ ನೇಮಕವನ್ನು ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದಿಸಿದೆ. ಈ ಹಿಂದಿನ ಸಿಇಒ ಪರಮೇಶ್ವರನ್ ಅಯ್ಯರ್ ​​ಅವರು ಎರಡು ವರ್ಷಗಳ ಅವಧಿಗೆ ವಾಷಿಂಗ್ಟನ್ ಡಿಸಿಯಲ್ಲಿರುವ ವಿಶ್ವ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಹೀಗಾಗಿ ಮುಖ್ಯಸ್ಥರ ಸ್ಥಾನ ತೆರವಾಗಿತ್ತು.

ಛತ್ತೀಸ್‌ಗಢ ಕೇಡರ್‌ನ 1987 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸುಬ್ರಹ್ಮಣ್ಯಂ ಅವರು ಮೂಲತಃ ಆಂಧ್ರಪ್ರದೇಶದವರು. ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಪದವಿ ಹೊಂದಿದ್ದಾರೆ. ಅಲ್ಲದೇ, ಅನುಭವಿ ಅಧಿಕಾರಿ. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಪಿಎಂಒದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಅನೇಕ ಅವಧಿಗಳಲ್ಲಿ ಕೆಲಸ ಮಾಡಿದ್ದಾರೆ. ಮುಖ್ಯವಾಗಿ ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯಾಗಿ ಹೆಸರುವಾಸಿಯಾಗಿದ್ದರು.

2019 ರಲ್ಲಿ ಜಮ್ಮು ಮತ್ತು ಕಾಶ್ಮೀರ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವಾಗ ಸುಬ್ರಹ್ಮಣ್ಯಂ ಅವರು ಕೇಂದ್ರ ಸರ್ಕಾರದ ಕಾರ್ಯದರ್ಶಿ ಶ್ರೇಣಿಯಲ್ಲಿ 26 ಐಎಎಸ್ ಅಧಿಕಾರಿಗಳಲ್ಲಿ ಒಬ್ಬರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2016 ಮತ್ತು 2020 ರ ನಡುವೆ ಕೇಂದ್ರದ ಪ್ರಮುಖ ಆರೋಗ್ಯ ಯೋಜನೆ ಸ್ವಚ್ಛ ಭಾರತ್ ಮಿಷನ್‌ ರೂವಾರಿಗಳಲ್ಲಿ ಒಬ್ಬರು.

ಇದನ್ನೂ ಓದಿ : ಮೋದಿ ಸಮಾವೇಶಕ್ಕೆ ಮೇಘಾಲಯ ಸರ್ಕಾರ ನಿರಾಕರಣೆ: ರಾಜಕೀಯ ಕಿತ್ತಾಟಕ್ಕೆ ನಾಂದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.