ಕೋಲ್ಕತ್ತಾ: ಪಶ್ಚಿಮಬಂಗಾಳ ಮತ್ತೊಂದು ಚುನಾವಣೆಗೆ ಸಜ್ಜಾಗುತ್ತಿದೆ. ಈ ಬಾರಿ 7 ವಿಧಾಸನಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದೆ ಎಂದು ತಿಳಿದು ಬಂದಿದೆ. ಬಹುಷ್ಯ ಸೆಪ್ಟೆಂಬರ್ 2021ರಲ್ಲಿ ಈ ಚುನಾವಣೆ ನಿಗದಿಯಾಗಬಹುದು ಎಂದು ತಿಳಿದು ಬಂದಿದೆ.
ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಶೀಘ್ರ ಚುನಾವಣೆ ನಡೆಸುವ ಬಗ್ಗೆ ದಿನಾಂಕ ನಿಗದಿ ಮಾಡಲಿದೆ ಹಾಗೂ ಈ ಬಗೆಗಿನ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ. ಭಾಬನಿಪುರ, ಖ್ರದಾ,ಶಾಂತಿಪುರ, ದಿನ್ಹತ್, ಗೋಸಬಾ, ಸಂಶೇರ್ಗಂಜ್ ಹಾಗೂ ಜಾಂಗಿಪುರ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಕಲ್ಲು ಗಣಿಗಾರಿಕೆಯಲ್ಲಿ ಕುಸಿತ: ಮೂವರು ಮಹಿಳೆಯರು ಸೇರಿ ಏಳು ಕಾರ್ಮಿಕರ ಸಾವು
ವಿಶ್ವಕರ್ಮಾ ಪೂಜೆಯ ಬಳಿಕ ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಚುನಾವಣಾ ಆಯೋಗ ಹಲವು ಕ್ಷೇತ್ರಗಳಲ್ಲಿ ಅಧಿಕಾರಿಗಳು ಚುನಾವಣೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಆಡಳಿತಾರೂಢ ಟಿಎಂಸಿ ಪಕ್ಷ ಇದಕ್ಕೆ ಸರ್ವಸನ್ನದ್ಧವಾಗಿದೆ. ಆದಷ್ಟು ಬೇಗ ಚುನಾವಣೆ ಮುಗಿದು ಬಿಡಲಿ ಎಂಬ ಮನಸ್ಥಿತಿಯಲ್ಲಿ ಇವೆ.
ಈ ಚುನಾವಣಾ ಆಯೋಗ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಚುನಾವಣೆ ನಡೆಸಲು ಪರಿಸ್ಥಿತಿ ಸರಿ ಇದೆಯಾ ಎಂಬ ಬಗ್ಗೆಯೂ ಮಾಹಿತಿ ಕೇಳಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಪರಿಸ್ಥಿತಿ ಸರಿಯಾಗಿದೆ. ಚುನಾವಣೆ ನಡೆಸಲು ಯಾವುದೇ ತೊಂದರೆ ಇಲ್ಲ ಎಂದು ಆಯೋಗಕ್ಕೆ ಭರವಸೆ ನೀಡಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಕ್ತಪಾತವಾಗಿತ್ತು. ಬಿಜೆಪಿ- ಟಿಎಂಸಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದವು. ಈ ನಡುವೆ ಈ ಉಪ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸುವ ಸಾಧ್ಯತೆ ಇದೆ. ಅವರು ಸಿಎಂ ಆಗಿ ಮುಂದುವರಿಯಬೇಕಾದರೆ ಯಾವುದಾದರೂ ಒಂದು ಕ್ಷೇತ್ರದಿಂದ ನಿಂತು ಗೆಲ್ಲಲೇ ಬೇಕಿದೆ.
ಸಿಎಂ ಮಮತಾ ಬ್ಯಾನರ್ಜಿ ತಮ್ಮ ಶಿಷ್ಯ ಹಾಗೂ ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ವಿರುದ್ಧ ನಂದಿಗ್ರಾಮದಲ್ಲಿ ಸೋಲು ಅನುಭವಿಸಿದ್ದರು. ಆದರೆ ಅವರ ಪಕ್ಷ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿತ್ತು.