ಪಶ್ಚಿಮ ಬಂಗಾಳ: ಕೊರೊನಾ ಸಾಂಕ್ರಾಮಿಕ ರೋಗದ ನಿಯಂತ್ರಣದ ನಂತರ ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಯಮಗಳನ್ನು ರೂಪಿಸಲಾಗುವುದು ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹೇಳಿದರು.
ರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ವ್ಯಾಪಿಸಿದ ಹಿನ್ನೆಲೆ ಪೌರತ್ವ ಕಾಯ್ದೆ ನಿಯಮಗಳನ್ನು ರೂಪಿಸಲು ಸಾಧ್ಯವಾಗಲಿಲ್ಲ. ಕೊರೊನಾ ಸಮಯದಲ್ಲಿ ಅಂತಹ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ.
ಅದಕ್ಕಾಗಿ ಕೋವಿಡ್ ವ್ಯಾಕ್ಸಿನೇಷನ್ ಪ್ರಾರಂಭವಾದ ನಂತರದ ದಿನಗಳಲ್ಲಿ ಪೌರತ್ವ ಕಾಯ್ದೆಯ ಕುರಿತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ವರದಿಗಾರರ ಪ್ರಶ್ನೆಯೊಂದಕ್ಕೆ ಅಮಿತ್ ಶಾ ಅವರು ಉತ್ತರಿಸಿದರು.