ನವದೆಹಲಿ : ಇದೇ 29ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿರುವ ನಿರ್ಧಾರಕ್ಕೆ ಸಚಿವ ಸಂಪುಟದ ಅನುಮೋದನೆ ನೀಡಲಾಗಿದೆ ಎಂದು ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಸಚಿವರು, ಮುಂಬರುವ ಸಂಸತ್ ಕಲಾಪದಲ್ಲಿ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.
PM Garib Kalyan Anna Yojana : ಕೋವಿಡ್ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಉಚಿತವಾಗಿ ಪಡಿತರ ವಿತರಣೆ ಮಾಡುವ 'ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ'ಯನ್ನು 2022ರ ಮಾರ್ಚ್‌ವರೆಗೆ ಮುಂದುವರೆಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವರು ವಿವರಿಸಿದರು.
Parliament winter session 2021 : ಕೃಷಿ ಕಾಯ್ದೆ-2021 ಅನ್ನು ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನವೇ ಕಲಾಪದ ಮುಂದೆ ಇರಿಸಲಾಗುತ್ತದೆ. ಇದರ ಜತೆಗೆ ಒಟ್ಟು 26 ಮಸೂದೆಗಳು ಅಂಗೀಕಾರಕ್ಕೆ ಬರಲಿವೆ. ನವೆಂಬರ್ 29ರಿಂದ ಸಂಸತ್ ಅಧಿವೇಶನ ಆರಂಭವಾಗಿ ಡಿಸೆಂಬರ್ 23ಕ್ಕೆ ಕೊನೆಗೊಳ್ಳಲಿದೆ.