ಕೋಲ್ಕತ್ತಾ: ರಾಜ್ಯದಲ್ಲಿ ನವೆಂಬರ್ 16, 2021ರಿಂದ ಶಾಲೆಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ (Calcutta High Court) ವಜಾಗೊಳಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಯಾವುದೇ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ಬೆಳವಣಿಗೆಯಿಂದ ಶಾಲೆಗಳ ಪುನರಾರಂಭಕ್ಕಿದ್ದ ಎಲ್ಲ ಅಡೆತಡೆಗಳು ನಿವಾರಣೆಯಾಗಿವೆ.
ಇದನ್ನೂ ಓದಿ: 'ನಿಧಿ'ಗಾಗಿ ಮುಗ್ಧ ಕೂಲಿ ಕಾರ್ಮಿಕ ಮಹಿಳೆಗೆ ಅವಮಾನ: ರಾಮನಗರದಲ್ಲಿ ಪೊಲೀಸರ ಮುಂದೆ 'ಬೆತ್ತಲಾದ' ಪೂಜಾರಿ!
ಪಿಐಎಲ್‌ನಲ್ಲಿ, ರಾಜ್ಯ ಸರ್ಕಾರ ಸರಿಯಾದ ಯೋಜನೆ ಇಲ್ಲದೆ ಶಾಲೆಗಳನ್ನು ತೆರೆಯುವ ನಿರ್ಧಾರವನ್ನು ಪ್ರಕಟಿಸಿದೆ ಎಂದು ಆರೋಪಿಸಲಾಗಿತ್ತು. ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಸಾಧ್ಯವಾಗುತ್ತದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ್ ಅವರು ಅರ್ಜಿ ವಿಚಾರಣೆ ನಡೆಸಿ, ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾದರೆ ಅವರ ಪೋಷಕರು ನ್ಯಾಯಾಲಯದ ಮೆಟ್ಟಿಲೇರಬೇಕು. ಆದರೆ ಈ ವಿಚಾರದಲ್ಲಿ ಅರ್ಜಿದಾರರು ಏಕೆ ಉತ್ಸುಕರಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.