ETV Bharat / bharat

ಚುನಾವಣೋತ್ತರ ಹಿಂಸಾಚಾರ..ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್ - ಸಿಬಿಐ

ಚುನಾವಣೋತ್ತರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುಂತೆ ಸಿಬಿಐಗೆ ಕೋಲ್ಕತ್ತಾ ಹೈಕೋರ್ಟ್​ಗೆ ಆದೇಶ ನೀಡಿದೆ.

ಕೋಲ್ಕತ್ತಾ ಹೈಕೋರ್ಟ್
ಹೈಕೋರ್ಟ್
author img

By

Published : Aug 19, 2021, 4:39 PM IST

Updated : Aug 19, 2021, 5:23 PM IST

ಕೋಲ್ಕತ್ತಾ(ಪಶ್ಚಿಮ ಬಂಗಾಳ):ಚುನಾವಣೋತ್ತರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟ್​ನ ಐವರು ನ್ಯಾಯಾಧೀಶರ ಪೀಠ ಆದೇಶಿಸಿದೆ. ನ್ಯಾಯಾಲಯವು ಅಕ್ಟೋಬರ್​ 4, 2021 ಕ್ಕೆ ವಿಚಾರಣೆ ಮುಂದೂಡಿದೆ.

ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ರಾಜೇಶ್ ಬಿಂದಾಲ್, ಐಪಿ ಮುಖೋಪಾಧ್ಯಾಯ, ಸೌಮೆನ್ ಸೇನ್, ಸುಬ್ರತಾ ತಳುಕ್ದಾರ್, ಹರೀಶ್ ಟಂಡನ್ ನಡೆಸುತ್ತಿದ್ದಾರೆ. ಸಿಬಿಐನ ವಿಶೇಷ ತನಿಖಾ ತಂಡದಲ್ಲಿ ಕೋಲ್ಕತ್ತಾ ಪೊಲೀಸ್ ಆಯುಕ್ತರು, ಸೌಮನ್​ ಮಿತ್ರ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸುಮನ್ ಬಾಲ ಸಾಹು ಇರಲಿದ್ದಾರೆ.

ಈ ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯನ್ನು ಭಾರತದ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ. ಮುಂದಿನ ಆರು ವಾರಗಳಲ್ಲಿ ಸಿಬಿಐ ಮತ್ತು ಎಸ್​ಐಟಿ ತನಿಖಾ ವರದಿಗಳನ್ನು ಸಲ್ಲಿಸುವಂತೆ ನ್ಯಾಯಪೀಠ ನಿರ್ದೇಶಿಸಿದೆ.

ಇದನ್ನೂ ಓದಿ: ಸಿಎಂ ಆಗ್ಬೇಕು ಎಂದ್ರೆ HDD ಮನೇಲಿ, PM ಸ್ಥಾನ ಬೇಕೆಂದರೆ ನೆಹರೂ ಮನೇಲಿ ಹುಟ್ಬೇಕು: ಅಶೋಕ್​​​ ವ್ಯಂಗ್ಯ

ಚುನಾವಣೋತ್ತರ ಹಿಂಸಾಚಾರ ಸಂಬಂಧ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹೈಕೋರ್ಟ್​ನ ಈ ಆದೇಶವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಕಾರ್ಯಾಚರಣೆಯನ್ನು ಎತ್ತಿಹಿಡಿದಿದೆ ಎಂದು ರಾಜ್ಯ ಕಾನೂನು ಘಟಕ ಅಭಿಪ್ರಾಯ ಪಟ್ಟಿದೆ.

ನ್ಯಾಯಾಲಯದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

ನ್ಯಾಯಾಲಯದ ಈ ನಿರ್ಧಾರವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದು, ಸಂತ್ರಸ್ತರ ಕುಟುಂಬಸ್ಥರಿಗೆ ನ್ಯಾಯ ಒದಗಿಸುವುದೇ ನಮ್ಮ ಗುರಿ ಎಂದಿದ್ದಾರೆ.

ಬಿಜೆಪಿ ವಕ್ತಾರ ಗೌರವ್ ಭಾಟಿಯಾ
ಬಿಜೆಪಿ ವಕ್ತಾರ ಗೌರವ್ ಭಾಟಿಯಾ

ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, ಸಂತ್ರಸ್ತರ ಕುಟುಂಬಸ್ಥರಿಗೆ ನ್ಯಾಯ ಒದಗಿಸುವುದೇ ಬಿಜೆಪಿಯ ಏಕೈಕ ಗುರಿ. ಹಿಂಸಾಚಾರದಲ್ಲಿ ಗಾಯಗೊಂಡವರಿಗೆ, ಬಲಿಯಾದವರಿಗೆ ನ್ಯಾಯ ಸಿಗುವವರೆಗೆ ನಾವು ಹೋರಾಡುತ್ತೇವೆ ಎಂದಿದ್ದಾರೆ.

Last Updated : Aug 19, 2021, 5:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.