ETV Bharat / bharat

IBPS Recruitment: ಕೆನರಾ ಬ್ಯಾಂಕ್​ ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ ನೇಮಕಾತಿ

author img

By

Published : Aug 5, 2023, 4:02 PM IST

ಬ್ರಾಬೆಷನರಿ ಆಫೀಸರ್​, ಮ್ಯಾನೇಜ್​ಮೆಂಟ್​ ಟ್ರೈನಿ ಹುದ್ದೆ ಸೇರಿದಂತೆ ಒಟ್ಟು 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Canara Bank Recruitment ; IBPS invited applications

ಕೆನರಾ ಬ್ಯಾಂಕ್​, ಬ್ಯಾಂಕ್​ ಆಫ್​ ಇಂಡಿಯಾ, ಬ್ಯಾಂಕ್​​ ಆಫ್​​ ಇಂಡಿಯಾ, ಬ್ಯಾಂಕ್​​ ಆಫ್​ ಮಹಾರಾಷ್ಟ್ರ, ಬ್ಯಾಂಕ್​ ಆಫ್​ ಬರೋಡಾ, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಬ್ಯಾಂಕ್​ ಸೇರಿದಂತೆ ವಿವಿಧ ಬ್ಯಾಂಕ್​ಗಳಲ್ಲಿ ಖಾಲಿ ಇರುವ ಕ್ಲರ್ಕ್​ ಹುದ್ದೆ ನೇಮಕಾತಿಗೆ ಇನ್ಸ್​ಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್ (IBPS) ಅರ್ಜಿ ಆಹ್ವಾನಿಸಿದೆ. ಪ್ರೊಬೆಷನರಿ ಆಫೀಸರ್​, ಮ್ಯಾನೇಜ್​ಮೆಂಟ್​ ಟ್ರೈನಿ ಹುದ್ದೆ ಸೇರಿದಂತೆ ಒಟ್ಟು 500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತದಾದ್ಯಂತ ಈ ನೇಮಕಾತಿ ನಡೆಯಲಿದೆ.

ಹುದ್ದೆ ವಿವರ: ಕೆನರಾ ಬ್ಯಾಂಕ್​, ಬ್ಯಾಂಕ್​ ಆಫ್​ ಇಂಡಿಯಾ, ಬ್ಯಾಂಕ್​​ ಆಫ್​​ ಇಂಡಿಯಾ, ಬ್ಯಾಂಕ್​​ ಆಫ್​ ಮಹಾರಾಷ್ಟ್ರ, ಬ್ಯಾಂಕ್​ ಆಫ್​ ಬರೋಡಾ, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಬ್ಯಾಂಕ್​, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​, ಪಂಜಾಬ್​ ನ್ಯಾಷನಲ್​ ಬ್ಯಾಂಕ್​, ಪಂಜಾಬ್​ ಮತ್ತು ಸಿಂದ್​​ ಬ್ಯಾಂಕ್, ಯುಕೊ ಬ್ಯಾಂಕ್​, ಯುನಿಯನ್​ ಬ್ಯಾಂಕ್​ ಆಫ್​ ಇಂಡಿಯಾ ಬ್ಯಾಂಕ್​ಗಳಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ನಡೆಯಲಿದೆ.

ಅಧಿಸೂಚನೆ
ಅಧಿಸೂಚನೆ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಧಿಕೃತ ಮಂಡಳಿ ಅಥವಾ ವಿಶ್ವವಿದ್ಯಾಲದಿಂದ ಪದವಿಯನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 20ರಿಂದ ಗರಿಷ್ಠ 30 ವರ್ಷ ವಯೋಮಿತಿ ಹೊಂದಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 175, ಇತರೆ ಅಭ್ಯರ್ಥಿಗಳು 850 ಅರ್ಜಿ ಶುಲ್ಕ ಪಾವತಿಸಬೇಕಿದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೂರು ಹಂತದಲ್ಲಿ ಆಯ್ಕೆ ಮಾಡಲಾಗುವುದು ಮೊದಲ ಹಂತ ಪ್ರಿಲಿಮನರಿ ಪರೀಕ್ಷೆ, ಎರಡನೇ ಹಂತದಲ್ಲಿ ಮುಖ್ಯ ಪರೀಕ್ಷೆ ಮತ್ತು ಅಂತಿಮವಾಗಿ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸರಿಯಾಗಿ ಪರಿಶೀಲಿಸಿ ಮುಂದುವರೆಯ ತಕ್ಕದ್ದು. ಸಂಪೂರ್ಣ ಈ ಹುದ್ದೆಗೆ ಅರ್ಜಿ ಸಲ್ಲಿಕೆ ಆಗಸ್ಟ್​​ 1 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 21 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆ ವೀಕ್ಷೆಗೆ ಅಭ್ಯರ್ಥಿಗಳು ibps.in ಈ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕಿದೆ. ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು https://ibpsonline.ibps.in/crpcl13jun23/ ಈ ಜಾಲತಾಣಕ್ಕೆ ಭೇಟಿ ನೀಡಬಹುದು.

ಇದನ್ನೂ ಓದಿ: Gramin Dak Sevak Job: ಅಂಚೆ ಇಲಾಖೆಯಿಂದ ಬೃಹತ್​ ನೇಮಕಾತಿ.. ರಾಜ್ಯದಲ್ಲಿ 1714 ಡಾಕ್​ ಸೇವಕ್​ ಹುದ್ದೆಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.