ETV Bharat / bharat

ಪಂಜಾಬ್​​​​ನಲ್ಲಿ ಮತ್ತಷ್ಟು ರಾಜಕೀಯ ಬಿಕ್ಕಟ್ಟು: ತುರ್ತು ಸಂಪುಟ ಸಭೆ ಕರೆದ ಸಿಎಂ

ರಾಜಿ ಮಾಡಿಕೊಳ್ಳುವುದರಿಂದಲೇ ಮನುಷ್ಯನ ವ್ಯಕ್ತಿತ್ವ ಕುಸಿಯುತ್ತದೆ. ಪಂಜಾಬ್​ನ ಭವಿಷ್ಯ ಮತ್ತು ಸಮೃದ್ಧಿಯ ವಿಚಾರದಲ್ಲಿ ನಾನು ರಾಜಿಯಾಗುವುದಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಸಿಧು ಉಲ್ಲೇಖಿಸಿದ್ದಾರೆ.

ಪಂಜಾಬ್ ಮತ್ತಷ್ಟು ರಾಜಕೀಯ ಬಿಕ್ಕಟ್ಟು: ತುರ್ತು ಸಂಪುಟ ಸಭೆ ಕರೆದ ಸಿಎಂ

author img

By

Published : Sep 29, 2021, 9:22 AM IST

ನವದೆಹಲಿ: ಪಂಜಾಬ್​ನ ರಾಜಕೀಯ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ನವದೆಹಲಿಗೆ ಬಂದು ಬಿಜೆಪಿಯ ಚಾಣಕ್ಯ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದರು ಎಂಬ ವಿಚಾರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಅಧಿಕಾರದಿಂದ ಕೆಳಗಿಳಿದ ಮೇಲೆ ಇದೇ ಮೊದಲ ಬಾರಿಗೆ ಅಮರೀಂದರ್ ದೆಹಲಿಗೆ ಭೇಟಿ ನೀಡಿ, ಬಿಜೆಪಿ ಮುಖಂಡರೊಂದಿಗೆ ಚರ್ಚೆ ನಡೆಸಿದ್ದಾರೆ. ಕ್ಯಾಪ್ಟನ್ ಅಮರೀಂದರ್​ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ. ಅವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಕೊಡಲಾಗುತ್ತದೆ ಎಂಬ ಊಹಾಪೋಹಗಳೂ ಹರಿದಾಡುತ್ತಿವೆ.

ಈ ಬಗ್ಗೆ ಕ್ಯಾಪ್ಟನ್ ಹೇಳೋದೇನು..?

ದೆಹಲಿಗೆ ತೆರಳಿದ ವಿಚಾರದ ಬಗ್ಗೆ ಮಾತನಾಡಿದ ಅಮರೀಂದರ್ ಸಿಂಗ್, ತಾವು ದೆಹಲಿಗೆ ಸ್ನೇಹಿತರನ್ನು ಮತ್ತು ಬೆಂಬಲಿಗರನ್ನು ಭೇಟಿ ಮಾಡಿದ್ದಾಗಿಯೂ, ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆ ಬೆಂಬಲಿಗರೊಂದಿಗೆ ಚರ್ಚೆ ನಡೆಸಲಾಗಿದೆ ಎಂದಿದ್ದಾರೆ.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರರಾದ ರವೀನ್ ತುಕ್ರಾಲ್ ಟ್ವೀಟ್ ಮಾಡಿ ಅಮರೀಂದರ್ ಅವರ ದೆಹಲಿ ಭೇಟಿ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ. ಇದು ಅವರ ವೈಯಕ್ತಿಕ ಭೇಟಿಯಾಗಿದ್ದು, ಸ್ನೇಹಿತರು ಮತ್ತು ಬೆಂಬಲಿಗರನ್ನು ಭೇಟಿಯಾಗಿದ್ದಾರೆ. ಹಾಗೆಯೇ ಕಪುರ್ತಲಾದಲ್ಲಿರುವ ಸರ್ಕಾರದ ಸಿಎಂ ನಿವಾಸವನ್ನು ಖಾಲಿ ಮಾಡುತ್ತಿದ್ದಾರೆ ಎಂದಿದ್ದಾರೆ.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಸೆಪ್ಟೆಂಬರ್ 18ರಂದು ಪಂಜಾಬ್​ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜೊತೆಗೆ ನವಜೋತ್ ಸಿಂಗ್ ಸಿಧು ಅನ್ನು ಮುಂದಿನ ಸಿಎಂ ಆಗಿ ಒಪ್ಪಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣದಿಂದ ಸಿಎಂ ಪಟ್ಟ ಚರಣ್​ಜಿತ್ ಸಿಂಗ್ ಚೆನ್ನಿ ಆಯ್ಕೆಯಾಗಿದ್ದರು.

ನವಜೋತ್ ರಾಜೀನಾಮೆ, ಮತ್ತಷ್ಟು ಕೋಲಾಹಲ

ಈ ಎಲ್ಲ ಬೆಳವಣಿಗೆಗಳ ನಡುವೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು, ಪಂಜಾಬ್ ಕಾಂಗ್ರೆಸ್​ನಲ್ಲಿ ಮತ್ತಷ್ಟು ಕೋಲಾಹಲ ಸೃಷ್ಟಿಸಿದೆ. ಸಿಧು ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ ಎಂದು ಕೆಲವು ಮೂಲಗಳು ತಿಳಿಸಿವೆ.

ರಾಜಿ ಮಾಡಿಕೊಳ್ಳುವುದರಿಂದಲೇ ಮನುಷ್ಯನ ವ್ಯಕ್ತಿತ್ವ ಕುಸಿಯುತ್ತದೆ. ಪಂಜಾಬ್​ನ ಭವಿಷ್ಯ ಮತ್ತು ಸಮೃದ್ಧಿಯ ವಿಚಾರದಲ್ಲಿ ನಾನು ರಾಜಿಯಾಗುವುದಿಲ್ಲ. ಇದೇ ಕಾರಣದಿಂದ ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಕಾಂಗ್ರೆಸ್​​ನಲ್ಲಿಯೇ ಮುಂದುವರೆಯುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ತುರ್ತು ಸಭೆ

ನವಜೋತ್ ಸಿಂಗ್ ಸಿಧು ಈ ನಿರ್ಣಯ ತೆಗೆದುಕೊಂಡ ನಂತರ ಪಂಜಾಬ್​ನ ನೂತನ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ತುರ್ತು ಕ್ಯಾಬಿನೆಟ್ ಸಭೆಯನ್ನು ಕರೆದಿದ್ದು, ಸುಮಾರು 10 ಗಂಟೆಗೆ ಸಭೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಪಂಜಾಬ್‌ನ ಕಾಂಗ್ರೆಸ್​ ಉಸ್ತುವಾರಿ ಹರೀಶ್ ರಾವತ್ ಈಗಿರುವ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಇಂದು ನವದೆಹಲಿಯಿಂದ ಪಂಜಾಬ್‌ಗೆ ಬರಲಿದ್ದು, ಸಿಧು ಅವರನ್ನು ಭೇಟಿ ಮಾಡಿ, ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಭಾರಿ ಅವಾಂತರ, ಅಪಾರ ಪ್ರಾಣಹಾನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.