ಚಂಡಿಗಢ (ಪಂಜಾಬ್) : ಪಂಜಾಬ್ ಕಾಂಗ್ರೆಸ್ ರಾಜಕೀಯದಲ್ಲಿ ನಿರಂತರವಾದ ವಿಭಿನ್ನ ರೀತಿಯ ಬೆಳವಣಿಗೆ ಕಂಡು ಬರುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಪಂಜಾಬ್ ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಕೂಡ ರಾಜೀನಾಮೆ ನೀಡಿದ್ದಾರೆ.
ಪಂಜಾಬ್ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಈ ರೀತಿಯ ಬೆಳವಣಿಗೆ ಕಂಡು ಬರುತ್ತಿದೆ. ಇದು ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ದಿಢೀರ್ ರಾಜೀನಾಮೆ ನೀಡುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
-
I told you so…he is not a stable man and not fit for the border state of punjab.
— Capt.Amarinder Singh (@capt_amarinder) September 28, 2021 " class="align-text-top noRightClick twitterSection" data="
">I told you so…he is not a stable man and not fit for the border state of punjab.
— Capt.Amarinder Singh (@capt_amarinder) September 28, 2021I told you so…he is not a stable man and not fit for the border state of punjab.
— Capt.Amarinder Singh (@capt_amarinder) September 28, 2021
ಇದನ್ನೂ ಓದಿರಿ: ಪಂಜಾಬ್ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ.. ರಾಜಕೀಯ ವಿಪ್ಲವ ಕಾರಣವಾಯ್ತೇ!?
ಕ್ಯಾ.ಅಮರೀಂದರ್ ಸಿಂಗ್ ಟ್ವೀಟ್
ನವಜೋತ್ ಸಿಂಗ್ ಸಿಧು ರಾಜೀನಾಮೆಗೆ ಖಂಡನೆ ವ್ಯಕ್ತಪಡಿಸಿರುವ ಕ್ಯಾ. ಅಮರೀಂದರ್ ಸಿಂಗ್, ಪಂಜಾಬ್ನಂತಹ ಗಡಿ ರಾಜ್ಯಕ್ಕೆ ಆತ ಸೂಕ್ತವಲ್ಲ ಹಾಗೂ ಸ್ಥಿರ ವ್ಯಕ್ತಿ ಅಲ್ಲ ಎಂದು ಈಗಾಗಲೇ ನಾನು ನಿಮಗೆ ತಿಳಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಕಳೆದ ಕೆಲ ತಿಂಗಳಿಂದ ಪಂಜಾಬ್ ಕಾಂಗ್ರೆಸ್ನಲ್ಲಿ ಎರಡು ಬಣಗಳು ಹುಟ್ಟಿಕೊಂಡಿವೆ. ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವೆ ವೈರತ್ವವಿತ್ತು. ಇದರ ಮಧ್ಯೆ ಕೂಡ ಹೈಕಮಾಂಡ್ ಮಾತಿನಂತೆ ಅಮರೀಂದರ್ ಸಿಂಗ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ನವಜೋತ್ ಸಿಂಗ್ ಸಿಧು ಮೇಲೆ ಗಂಭೀರ ಆರೋಪ ಮಾಡಿ, ಅವರಿಗೆ ಪಾಕ್ ಪ್ರಧಾನಿ ಜೊತೆ ಸಂಪರ್ಕವಿದೆ ಎಂದು ಹೇಳಿದ್ದರು.
ಇನ್ನು, ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.