ರಿಷಿಕೇಶ(ಉತ್ತರಾಖಂಡ): ಏಕಾಏಕಿ ಕಾರ್ಗೆ ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದಿರುವ ಘಟನೆ ಉತ್ತರಾಖಂಡ್ನ ರಿಷಿಕೇಶ್ನಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಇದೀಗ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಹರಿದ್ವಾರ-ರಿಷಿಕೇಶ್ ರಸ್ತೆಯ ರೈವಾಲಾ ಬಳಿ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಪರಿಣಾಮ ಕಾರು ಪಲ್ಟಿಯಾಗಿದೆ. ತಕ್ಷಣವೇ ಅದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರೊಳಗಿದ್ದ ಐವರು ಹೊರಬಂದಿರುವ ಕಾರಣ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ. ಆದರೆ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಇದನ್ನೂ ಓದಿರಿ: ಆಧಾರ್ಗೆ ಪ್ಯಾನ್ ಕಾರ್ಡ್ ಜೋಡಣೆ: ಗಡುವು ಸೆ.30ರವರೆಗೆ ವಿಸ್ತರಣೆ
ಘಟನೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸಿದೆ. ಆದರೆ ಈ ವೇಳೆಗಾಗಲೇ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿತ್ತು.