ರಿಷಿಕೇಶ್/ಜೈಪುರ್: ಬೆಳ್ಳಂಬೆಳಗ್ಗೆ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ 9 ಜನರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ಘಟನೆಗಳು ನಡೆದಿವೆ.
ಘಟನೆ 1: ಮುಂಬೈನಿಂದ ಬದರಿನಾಥ ದರ್ಶನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಕಾರ್ವೊಂದು ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ರಿಷಿಕೇಶ್ನ ಬದರಿನಾಥ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಏಮ್ಸ್ಗೆ ದಾಖಲು ಮಾಡಲಾಗಿದೆ.
ಇಂದು ಬೆಳಗ್ಗೆ ಐವರು ಪ್ರಯಾಣಿಕರು ಹರಿದ್ವಾರದ ಬದರಿನಾಥ್ ಧಾಮಕ್ಕೆ ತೆರಳಿದ್ದರು. ಕಾರು ಬ್ರಹ್ಮಪುತ್ರ ಬಳಿ ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡು ಆಳವಾದ ಕಮರಿಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಠಾಣೆ ಪ್ರಭಾರಿ ಇನ್ಸ್ಪೆಕ್ಟರ್ ಮುನಿಯ ರೆತಿ ರಿತೇಶ್ ಶಾ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಯಮನಂತೆ ಬಂದ ಕಾರು: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು!
ಘಟನೆ -2: ಮತ್ತೊಂದು ಪ್ರಕರಣ ರಾಜಸ್ಥಾನ ನಾಗೌರ್ನಲ್ಲಿ ನಡೆದಿದ್ದು, ಟ್ರಕ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಸಂಭವಿಸಿದ್ದು, ಐವರು ದುರ್ಮರಣಕ್ಕೀಡಾಗಿದ್ದಾರೆ. ಉಳಿದಂತೆ 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾಡ್ನೂನ್ ಹೆದ್ದಾರಿಯ ಬುರ್ಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇವರೆಲ್ಲರೂ ದೇವಸ್ಥಾನಕ್ಕೆ ಭೇಟಿ ನೀಡಿ, ವಾಪಸ್ ತೆರಳುತ್ತಿದ್ದರು. ಮೃತರನ್ನ ಫೂಲಚಂದ್(40),ರೋಹಿತಾಶ್(25), ಕೌಶಲ್ಯ(25), ರುಕ್ಮಾ(27) ಹೇಮರಾಜ್(7) ಎಂದು ಗುರುತಿಸಲಾಗಿದೆ.