ಬಾಲಸೋರ್(ಒಡಿಶಾ): ಬಾಲಸೋರ್ ಜಿಲ್ಲೆಯ ರಾಜ್ಯ ಹೆದ್ದಾರಿ 57 ರ ನಗೌನ್ ಛಾಕ್ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ನಿಂತಿದ್ದ ನಾಲ್ವರ ಮೇಲೆ ಹರಿದಿದೆ. ಈ ವೇಳೆ ಸ್ಥಳದಲ್ಲೇ ಒಬ್ಬ ಮಹಿಳೆ ಸಾವನ್ನಪ್ಪಿದ್ದರೆ, ಇನ್ನೂ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಜಲೇಶ್ವರ್ಪುರ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಭಾರಿ ಜನ ಜಮಾಯಿಸಿದ್ದು, ಕಾರು ಚಾಲಕ ಮತ್ತು ಜನರ ಮಧ್ಯೆ ವಾಗ್ವಾದ ಉಂಟಾಗಿದೆ. ಇದಲ್ಲದೇ ಮೃತರ ಕುಟುಂಬಸ್ಥರು ರಸ್ತ ತಡೆ ಕೂಡ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಇದನ್ನೂ ಓದಿ: ಸರ್ಕಾರಿ ಬಸ್ಗೆ ಡಿಕ್ಕಿ ಹೊಡೆದ ಲಾರಿ.. ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಮಾಹಿತಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಎಂದು ತಿಳಿದುಬಂದಿದೆ.