ಮುಂಬೈ (ಮಹಾರಾಷ್ಟ್ರ): ಅಗತ್ಯ ಕಾರಣವಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸುವ ಮೂಲಕ ಕೊರೊನಾ ಮಾನದಂಡಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬಾಲಿವುಡ್ ನಟ ಟೈಗರ್ ಶ್ರಾಫ್ ವಿರುದ್ಧ ನಿನ್ನೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೊರೊನಾ ತಡೆಯಲು ಲಾಕ್ಡೌನ್ ವಿಧಿಸಲಾಗಿದೆ. ಆದ್ರೆ, ಸಂಜೆ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ಬಳಿ ಶ್ರಾಫ್ ತಿರುಗಾಡುತ್ತಿರುವುದು ಕಂಡುಬಂದಿದೆ.
ಇದನ್ನು ಗಮನಿಸಿದ ಪೊಲೀಸರು ಪ್ರಶ್ನಿಸಿದಾಗ, ನಟ ಸರಿಯಾದ ಉತ್ತರ ನೀಡಿಲ್ಲ. ಈ ಹಿನ್ನೆಲೆ ಪೊಲೀಸರು ನಟನ ವಿವರಗಳನ್ನು ತೆಗೆದುಕೊಂಡು ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.