ಮೊಹಾಲಿ (ಪಂಜಾಬ್): ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಹತ್ಯೆ ಮಾಡಿದರೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ಪೋಸ್ಟರ್ ಹಾಕಿದ್ದ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಅಮರಿಂದರ್ ಸಿಂಗ್ ಅವರನ್ನು ಹತ್ಯೆ ಮಾಡಿದರೆ 10 ಲಕ್ಷ ರೂ. ನೀಡಲಾಗುತ್ತದೆ ಎಂದು ಮೊಹಾಲಿಯ 66 ಮತ್ತು 67 ಬೀದಿಯಲ್ಲಿ ಅಪರಿಚಿತ ವ್ಯಕ್ತಿಗಳು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್‌ನಲ್ಲಿ ಬರೆಯಲಾದ ಇ-ಮೇಲ್ ಐಡಿ ಕೂಡ ಕಂಡುಬಂದಿದೆ. ಮೇಲ್ಕಂಡ ರಸ್ತೆಗಳಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಓದಿ : ತಾಂಡಾ ಅತ್ಯಾಚಾರ ಪ್ರಕರಣ : ಪಂಜಾಬ್ ಸಿಎಂ ರಾಜೀನಾಮೆಗೆ ಒತ್ತಾಯಿಸಿದ ಎಎಪಿ ಮಹಿಳಾ ಶಾಸಕರು