ನವದೆಹಲಿ: 100 ಕೋಟಿ ರೂ ಕೊಟ್ಟರೆ, ರಾಜ್ಯಸಭಾ ಸ್ಥಾನ ಮತ್ತು ರಾಜ್ಯಪಾಲರ ಹುದ್ದೆಯ ಸುಳ್ಳು ಭರವಸೆ ನೀಡಿ ಶಾಸಕರು, ಸಂಸದರು ಹಾಗೂ ರಾಜಕೀಯ ನಾಯಕರಿಗೆ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಸಿಬಿಐ ಬಹು ರಾಜ್ಯಗಳ ವಂಚಕರ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಸಿಬಿಐ ನಾಲ್ವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಂಸ್ಥೆ ಶೋಧ ನಡೆಸಿದ್ದು, ಗ್ಯಾಂಗ್‌ನ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಆರೋಪಿಗಳಲ್ಲಿ ಒಬ್ಬ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಏಜೆನ್ಸಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಎಫ್‌ಐಆರ್‌ನಲ್ಲಿ ಮಹಾರಾಷ್ಟ್ರದ ಲಾತೂರ್‌ನ ಕಮಲಾಕರ್ ಪ್ರೇಮಕುಮಾರ್ ಬಂಡಗರ್, ಕರ್ನಾಟಕದ ಬೆಳಗಾವಿಯ ರವೀಂದ್ರ ವಿಠಲ್ ನಾಯಕ್ ಮತ್ತು ದೆಹಲಿ-ಎನ್‌ಸಿಆರ್ ಮೂಲದ ಮಹೇಂದ್ರ ಪಾಲ್ ಅರೋರಾ, ಅಭಿಷೇಕ್ ಬೂರಾ ಮತ್ತು ಮೊಹಮ್ಮದ್ ಐಜಾಜ್ ಖಾನ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ:ಚುನಾವಣಾ ಆಯೋಗದಿಂದ ನೋಟಿಸ್: ನ್ಯಾಯಾಲಯದ ಕದ ತಟ್ಟಲಿದೆ ಶಿವಸೇನೆ