ನವದೆಹಲಿ: ಆಮ್ ಆದ್ಮಿ ಪಕ್ಷವನ್ನು ಇಬ್ಭಾಗಿಸಿ ಬಿಜೆಪಿಯೊಂದಿಗೆ ಸೇರ್ಪಡೆಯಾದರೆ ತಮ್ಮ ವಿರುದ್ಧದ ಎಲ್ಲ ಪ್ರಕರಣಗಳನ್ನು ಸಮಾಪ್ತಿ ಮಾಡುವುದಾಗಿ ಬಿಜೆಪಿ ಆಫರ್ ನೀಡಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಗಂಭೀರ ಆಪಾದನೆ ಮಾಡಿದ್ದಾರೆ. ಎಎಪಿ ಸರ್ಕಾರದ ಹಿಂದಿನ ಅಬಕಾರಿ ನೀತಿ ಕುರಿತಾಗಿ ಸಿಸೋಡಿಯಾ ಅವರನ್ನು ಸಿಬಿಐ ತೀವ್ರ ವಿಚಾರಣೆಗೊಳಪಡಿಸಿರುವ ಬೆನ್ನಲ್ಲೇ ಸಿಸೋಡಿಯಾ ಅವರ ಆರೋಪ ರಾಜಕೀಯವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ.
-
मेरे पास भाजपा का संदेश आया है- “आप” तोड़कर भाजपा में आ जाओ, सारे CBI ED के केस बंद करवा देंगे
— Manish Sisodia (@msisodia) August 22, 2022 " class="align-text-top noRightClick twitterSection" data="
मेरा भाजपा को जवाब- मैं महाराणा प्रताप का वंशज हूँ, राजपूत हूँ। सर कटा लूँगा लेकिन भ्रष्टाचारियो-षड्यंत्रकारियोंके सामने झुकूँगा नहीं। मेरे ख़िलाफ़ सारे केस झूठे हैं।जो करना है कर लो
">मेरे पास भाजपा का संदेश आया है- “आप” तोड़कर भाजपा में आ जाओ, सारे CBI ED के केस बंद करवा देंगे
— Manish Sisodia (@msisodia) August 22, 2022
मेरा भाजपा को जवाब- मैं महाराणा प्रताप का वंशज हूँ, राजपूत हूँ। सर कटा लूँगा लेकिन भ्रष्टाचारियो-षड्यंत्रकारियोंके सामने झुकूँगा नहीं। मेरे ख़िलाफ़ सारे केस झूठे हैं।जो करना है कर लोमेरे पास भाजपा का संदेश आया है- “आप” तोड़कर भाजपा में आ जाओ, सारे CBI ED के केस बंद करवा देंगे
— Manish Sisodia (@msisodia) August 22, 2022
मेरा भाजपा को जवाब- मैं महाराणा प्रताप का वंशज हूँ, राजपूत हूँ। सर कटा लूँगा लेकिन भ्रष्टाचारियो-षड्यंत्रकारियोंके सामने झुकूँगा नहीं। मेरे ख़िलाफ़ सारे केस झूठे हैं।जो करना है कर लो
ಆಪ್ ತೊರೆದು ಬಿಜೆಪಿಗೆ ಬನ್ನಿ ಎಂದು ಬಿಜೆಪಿಯಿಂದ ನನಗೆ ಸಂದೇಶ ಬಂದಿದೆ. ನಿಮ್ಮ ವಿರುದ್ಧದ ಎಲ್ಲ ಸಿಬಿಐ ಮತ್ತು ಇಡಿ ಕೇಸುಗಳನ್ನು ಮುಕ್ತಾಯಗೊಳಿಸುವ ಭರವಸೆ ನೀಡುತ್ತೇವೆ ಎಂದು ಸಂದೇಶ ಬಂದಿದೆ ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ನಾನೊಬ್ಬ ರಜಪೂತನಾಗಿದ್ದು, ಮಹಾರಾಣಾ ಪ್ರತಾಪ್ ಅವರ ವಂಶಜನಾಗಿದ್ದೇನೆ. ನನ್ನ ತಲೆ ಕತ್ತರಿಸಿದರೂ ಸರಿ, ಭ್ರಷ್ಟರು ಮತ್ತು ಸಂಚುಕೋರರ ಎದುರು ತಲೆ ಬಾಗಿಸಲಾರೆ. ನನ್ನ ವಿರುದ್ಧದ ಎಲ್ಲ ಪ್ರಕರಣಗಳು ಸುಳ್ಳು ಎಮದಿರುವ ಸಿಸೋಡಿಯಾ, ಬಿಜೆಪಿ ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.
ಎಎಪಿ ತನ್ನ ವಿರುದ್ಧದ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದು, ಇದೆಲ್ಲ ರಾಜಕೀಯ ಪ್ರೇರಿತ ಎಂದು ಹೇಳಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು, ಹಣದುಬ್ಬರ ಮತ್ತು ನಿರುದ್ಯೋಗಗಳು ಗಗನಕ್ಕೇರುತ್ತಿರುವ ಮಧ್ಯೆ ದೇಶದಾದ್ಯಂತ ಚುನಾಯಿತ ಸರ್ಕಾರಗಳನ್ನು ಉರುಳಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ರೂಪಾಯಿ ಮೌಲ್ಯ ಕುಸಿಯುತ್ತಿದೆ, ಜನತೆ ಹಣದುಬ್ಬರದಿಂದ ತೊಂದರೆಗೀಡಾಗಿದ್ದಾರೆ, ನಿರುದ್ಯೋಗ ಹೆಚ್ಚಾಗಿದೆ. ಇದರ ಮಧ್ಯೆ ಈ ಜನ 'ಸಿಬಿಐ-ಇಡಿ' ಆಟ ಆಡುತ್ತಿದ್ದಾರೆ ಮತ್ತು ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಉರುಳಿಸುವಲ್ಲಿ ಮತ್ತು ಬರೀ ಟೀಕೆ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಗುಜರಾತ್ ಪ್ರವಾಸ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದಿನಿಂದ ಎರಡು ದಿನಗಳ ಗುಜರಾತ್ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಎಎಪಿ ಸರ್ಕಾರದ ಹಿಂದಿನ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸುತ್ತಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಕೇಜ್ರಿವಾಲ್ರೊಂದಿಗೆ ಗುಜರಾತ್ಗೆ ತೆರಳಲಿದ್ದಾರೆ.
ಎಎಪಿ ನಾಯಕರು ಸೋಮವಾರ ಅಹಮದಾಬಾದ್ ತಲುಪಿ ಹಿಮ್ಮತ್‌ನಗರದಲ್ಲಿ ಟೌನ್ ಹಾಲ್ ಸಭೆಯಲ್ಲಿ ಮಾತನಾಡಲಿದ್ದಾರೆ. ಮಂಗಳವಾರ ಭಾವ ನಗರದಲ್ಲಿ ನಡೆಯಲಿರುವ ಟೌನ್ ಹಾಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.