ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳು ಸೇರಿದಂತೆ ಏಳು ಆರೋಪಿಗಳ ವಿರುದ್ಧ ಸಿಬಿಐ ಮೊದಲ ಚಾರ್ಜ್ಶೀಟ್ ಸಲ್ಲಿಸಿದೆ.
ಸಿಬಿಐ ಚಾರ್ಜ್ಶೀಟ್ನಲ್ಲಿ ಈಗಾಗಲೇ ಬಂಧಿತ ಇಬ್ಬರು ಉದ್ಯಮಿಗಳು, ಸುದ್ದಿ ವಾಹಿನಿಯ ಮುಖ್ಯಸ್ಥ, ಹೈದರಾಬಾದ್ ಮೂಲದ ಮದ್ಯ ಉದ್ಯಮಿ, ದೆಹಲಿ ಮೂಲದ ಮದ್ಯ ವಿತರಕ ಮತ್ತು ಅಬಕಾರಿ ಇಲಾಖೆಯ ಇಬ್ಬರು ಅಧಿಕಾರಿಗಳು ಹೆಸರು ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಡಿಸಿಎಂ ಮನೀಶ್ ಸಿಸೋಡಿಯಾ ಕೇಳಿದ ಕಡತ ನೀಡಲು ಒಪ್ಪದ ದೆಹಲಿ ಕಾನೂನು ಇಲಾಖೆ?