ಕೊಚ್ಚಿ (ಕೇರಳ): ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣರಾಗಿದ್ದಾರೆ ಎನ್ನುವ ಆರೋಪದ ಮೇಲೆ ಮಹಿಳಾ ಅಧಿಕಾರಿ ಸೇರಿದಂತೆ 9 ಪೊಲೀಸ್ ಸಿಬ್ಬಂದಿ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಕೊಚ್ಚಿಯ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದೆ.
ಚಾರ್ಜ್‌ಶೀಟ್‌ನ ಪ್ರಕಾರ, ಆರೋಪಿ ರಾಜ್‌ಕುಮಾರ್ ಜೂನ್ 21, 2019 ರಂದು ನ್ಯಾಯಾಂಗ ಬಂಧನದಲ್ಲಿದ್ದ ವೇಳೆ ಮರಣ ಹೊಂದಿದ್ದಾರೆ. ಅಕ್ರಮ ಬಂಧನದಲ್ಲಿರಿಸಿ ಪೊಲೀಸರು ಕ್ರೂರವಾಗಿ ಹಲ್ಲೆ ನಡೆಸಿದ ಪರಿಣಾಮ ಆರೋಪಿ ಸಾವನ್ನಪ್ಪಿದ್ದಾನೆ ಎಂದು ಉಲ್ಲೇಖಿಸಲಾಗಿದೆ.
ಈ ಪ್ರಕರಣದಲ್ಲಿ ಸಿಬಿಐಯು 152 ಸಾಕ್ಷಿಗಳು, 145 ದಾಖಲೆಗಳು ಮತ್ತು 32 ವಸ್ತುವಿಷಯಗಳನ್ನು ಪರೀಕ್ಷಿಸಿದೆ. ಈ ಪ್ರಕರಣವನ್ನು ಕೇರಳ ಹೈಕೋರ್ಟ್‌ನ ಆದೇಶದ ಮೇರೆಗೆ, ಕಳೆದ ವರ್ಷ ಜನವರಿ 24 ರಂದು ಸಿಬಿಐ ದಾಖಲಿಸಿದೆ.
ಈ ಸುದ್ದಿಯನ್ನೂ ಓದಿ: ನಿವೃತ್ತ ಐಎಎಸ್ ಅಧಿಕಾರಿ ಎನ್‌ಜಿಒಗಳ ಮೇಲೆ ಬಾಲಪರಾಧಿಗಳ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲು
ಪೊಲೀಸ್ ವರಿಷ್ಠಾಧಿಕಾರಿ ವೇಣುಗೋಪಾಲ್, ಡೆಪ್ಯೂಟಿ ಎಸ್ಪಿ ಶಾಮ್ಸ್ ಮತ್ತು ಜೈಲು ಅಧಿಕಾರಿಗಳು, ವೈದ್ಯರು ಸೇರಿದಂತೆ ಇತರರ ವಿರುದ್ಧ ಹೆಚ್ಚಿನ ತನಿಖೆ ನಡೆಯುತ್ತಿದೆ
.