ETV Bharat / bharat

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ: ಮತ್ತೊಂದು ಪ್ರಕರಣ ದಾಖಲಿಸಿದ ಸಿಬಿಐ

ಮೇ.2ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಹಿಂಸಾಚಾರ ಘಟನೆಗಳು ವರದಿಯಾಗಿತ್ತು. ಹಿಂಸಾಚಾರದಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

CBI files one more case in connection with post-poll violence in West Bengal
ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ
author img

By

Published : Nov 10, 2021, 10:44 AM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ವಿಧಾನಸಭೆ ಚುನಾವಣೆ ಬಳಿಕ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತೊಂದು ಪ್ರಕರಣವನ್ನು ದಾಖಲಿಸಿದೆ. ಸಿಬಿಐ ಪ್ರಕಾರ, ಹೊಸ ಪ್ರಕರಣವು ಈ ವರ್ಷದ ಮೇನಲ್ಲಿ ಪಶ್ಚಿಮ ಮೇದಿನಿಪುರ ಜಿಲ್ಲೆಯಲ್ಲಿ ನಡೆದ ಬಿಸ್ವಜಿತ್ ಮಹೇಶ್ ಹತ್ಯೆಗೆ ಸಂಬಂಧಿಸಿದೆ ಎಂದು ತಿಳಿಸಿದೆ.

ಈ ವರ್ಷ ಆಗಸ್ಟ್ 19ರಂದು ನೀಡಲಾದ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಪಾಲಿಸಿ ಸಿಬಿಐ ಪ್ರಕರಣವನ್ನು ದಾಖಲಿಸಿದೆ. ಸಂಸ್ಥೆಯು ಇದುವರೆಗೆ 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಪ್ರಕರಣಗಳಲ್ಲಿ ತನಿಖೆ ಮುಂದುವರಿದಿದೆ. ಮೇ 2ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಹಿಂಸಾಚಾರ ಘಟನೆಗಳು ವರದಿಯಾಗಿದ್ದವು. ನಂತರ ಗೃಹ ಸಚಿವಾಲಯದಿಂದ ನಿಯೋಜಿಸಲಾದ ನಾಲ್ವರು ಸದಸ್ಯರ ತಂಡವು ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತ್ತು.

ಈ ವರ್ಷದ ಆಗಸ್ಟ್‌ನಲ್ಲಿ ಕೋಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರವನ್ನ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿತ್ತು. ಇದರ ಜೊತೆ ಕೆಲ ಸಣ್ಣ ಮಟ್ಟದ ಅಪರಾಧ ತನಿಖೆಗಾಗಿ ಎಸ್​ಐಟಿ ತಂಡ ರಚನೆಗೂ ಸೂಚನೆ ನೀಡಿತ್ತು. ಬಳಿಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ 7 ಮಂದಿ ಸಮಿತಿಯ ಶಿಫಾರಸಿನಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲಾಗಿತ್ತು.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಹಣ ವಸೂಲಿ ಆರೋಪ: ಸತತ 11 ಗಂಟೆ ಪ್ರಭಾಕರ್ ಸೈಲ್​ ವಿಚಾರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.