ಮುಂಬೈ: ಪರಂಬೀರ್ ಸಿಂಗ್ ಸಲ್ಲಿಸಿದ ದೂರು ಅನಿಲ್ ದೇಶ್ಮುಖ್ ಅವರ ಭ್ರಷ್ಟಾಚಾರ ಪ್ರಕರಣಕ್ಕೆ ಮಾತ್ರ ಸಂಬಂಧಿಸಿದೆ. ರಶ್ಮಿ ಶುಕ್ಲಾ ಫೋನ್ ಟ್ಯಾಪಿಂಗ್ ಮತ್ತು ಭ್ರಷ್ಟಾಚಾರ ಪ್ರಕರಣದ ದೂರಿಗೆ ಯಾವುದೇ ಸಂಬಂಧವಿಲ್ಲ. ಆದರೆ, ಸಿಬಿಐ ಇನ್ನೂ ರಶ್ಮಿ ಶುಕ್ಲಾ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯದ ಗಮನಕ್ಕೆ ತಂದಿದೆ.
ಭ್ರಷ್ಟಾಚಾರ ಆರೋಪದಡಿ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಯನ್ನು ಸಿಬಿಐ ನಡೆಸುತ್ತಿದೆ. ಪ್ರಕರಣದಲ್ಲಿನ ಕೆಲ ವಿಚಾರಗಳನ್ನು ಕೈ ಬಿಡುವಂತೆ ಕೋರಿ ರಾಜ್ಯ ಸರ್ಕಾರ ಮತ್ತು ಅನಿಲ್ ದೇಶ್ಮುಖ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಕುರಿತು ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ, ಸಿಬಿಐ ನ್ಯಾಯಾಲಯದ ಆದೇಶವನ್ನು ಪಾಲಿಸುತ್ತಿಲ್ಲ. ಸಚಿನ್ ವಾಜೆ ಅವರಿಗೂ ಹಿರಿಯ ಅಧಿಕಾರಿಗಳ ವರ್ಗಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಉದ್ಧವ್ ಠಾಕ್ರೆ ಸರ್ಕಾರ ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿತು. ಮಾಹಿತಿ ಆಲಿಸಿದ ನ್ಯಾಯಾಲಯ ಜೂನ್ 21 ಕ್ಕೆ ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ:ಮಾಜಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಸೇರಿ 26 ಪೊಲೀಸರ ವಿರುದ್ಧ ಎಫ್ಐಆರ್