ಮುಂಬೈ : ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರ ಇಬ್ಬರು ವೈಯುಕ್ತಿಕ ಸಿಬ್ಬಂದಿಯನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ವೈಯಕ್ತಿಕ ಸಹಾಯಕ ಕುಂದನ್ ಶಿಂಧೆ ಮತ್ತು ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಪಾಲಂಡೆ ಅವರನ್ನು ಮುಂಬೈ ಉಪನಗರ ಸ್ಯಾಂಟಕ್ರೂಝ್ನ ಡಿಆರ್ಡಿಒ ಅತಿಥಿ ಗೃಹದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.
ಇದನ್ನೂ ಓದಿ: 100 ಕೋಟಿ ಲಂಚ ಆರೋಪ ಪ್ರಕರಣ: ತನಿಖೆ ತೀವ್ರಗೊಳಿಸಿದ ಸಿಬಿಐ
ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಮುಂಬೈನ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ ತಿಂಗಳಿಗೆ 100 ಕೋಟಿ ರೂ. ಸಂಗ್ರಹಿಸುವಂತೆ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಗುರಿ ನಿಗದಿಪಡಿಸಿದ್ದರು ಎಂದು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಭೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿತ್ತು.
ಇದನ್ನೂ ಓದಿ: ಆರೋಪಗಳು ಬಲವಾಗಿವೆ: ಮಹಾ ಸರ್ಕಾರ, ದೇಶಮುಖ್ ಅರ್ಜಿ ವಜಾ ಮಾಡಿದ ಸುಪ್ರೀಂ
ಬಾಂಬೆ ಹೈಕೋರ್ಟ್ನ ಆದೇಶವನ್ನು ರದ್ದುಪಡಿಸುವಂತೆ ಕೋರಿ ಮಹಾರಾಷ್ಟ್ರ ಸರ್ಕಾರ ಮತ್ತು ಅನಿಲ್ ದೇಶ್‌ಮುಖ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ, ಸುಪ್ರೀಂಕೋರ್ಟ್ ಎರಡೂ ಕಡೆಯವರ ಅರ್ಜಿಯನ್ನು ವಜಾಗೊಳಿಸಿ, ಹೈಕೋರ್ಟ್ ಆದೇಶ ಎತ್ತಿ ಹಿಡಿದಿತ್ತು. ಹಾಗಾಗಿ, ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ.