ಪಾಟ್ನಾ(ಬಿಹಾರ): ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳದ (ಆರ್ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ಗೆ ಸಂಬಂಧಿಸಿದ 15 ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ಮಾಡಿದ್ದು, ಇಂದು ಬೆಳಗ್ಗೆಯಿಂದ ಶೋಧ ನಡೆಯುತ್ತಿದೆ.
ಮೂಲಗಳಿಂದ ದೊರೆತ ಮಾಹಿತಿ ಪ್ರಕಾರ, ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ಮತ್ತು ಮಗಳು ಮಿಸಾಗೆ ಸಂಬಂಧಿಸಿದ ಸ್ಥಳಗಳೂ ಸೇರಿದಂತೆ ಬಿಹಾರ ಮತ್ತು ದೆಹಲಿಯ ಹಲವು ಸ್ಥಳಗಳಲ್ಲಿ ತನಿಖಾಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲಾಲು 2004 ರಿಂದ 2009 ರವರೆಗೆ ರೈಲ್ವೆ ಸಚಿವರಾಗಿದ್ದರು. ಈ ಅವಧಿಯಲ್ಲಿ ಭಾರಿ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಇದರಲ್ಲಿ ಉದ್ಯೋಗ ನೀಡುವುದಾಗಿ ಭೂಮಿ ಅಥವಾ ನಿವೇಶನಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದೂ ಸೇರಿದ್ದು ಲಾಲು ಮತ್ತು ಮಗಳ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಐಸಿಸ್ ಉಗ್ರ ಸಂಘಟನೆಗೆ ಯುವಕರ ಸೇರಿಸಲು ಬೆಂಗಳೂರಲ್ಲಿ ನಡೆದಿತ್ತು ಭರ್ಜರಿ ಸಿದ್ಧತೆ!