ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)ನ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಫೆಬ್ರವರಿ 15ರಂದೇ ಎರಡೂ ಪರೀಕ್ಷೆಗಳು ಆರಂಭವಾಗಲಿವೆ.
10ನೇ ತರಗತಿ ಪರೀಕ್ಷೆಯು ಫೆಬ್ರವರಿ 15ರಿಂದ ಆರಂಭವಾಗಲಿದ್ದು, ಮಾರ್ಚ್ 21ರವರೆಗೆ ನಡೆಯಲಿದೆ. ಅದೇ ರೀತಿಯಾಗಿ 12ನೇ ತರಗತಿ ಪರೀಕ್ಷೆಯು ಫೆಬ್ರವರಿ 15ರಂದು ಪ್ರಾರಂಭವಾಗುತ್ತದೆ. ಏಪ್ರಿಲ್ 5ರಂದು ಈ ಪರೀಕ್ಷೆ ಕೊನೆಗೊಳ್ಳುತ್ತದೆ. 10, 12ನೇ ತರಗತಿಯ ಎರಡೂ ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭವಾಗಿ ಮಧ್ಯಾಹ್ನ 1.30ಕ್ಕೆ ಮುಕ್ತಾಯವಾಗಲಿವೆ.
-
CBSE Class 10 & 12 exams to start from February 15, 2023 pic.twitter.com/KuFmdVfnHi
— ANI (@ANI) December 29, 2022 " class="align-text-top noRightClick twitterSection" data="
">CBSE Class 10 & 12 exams to start from February 15, 2023 pic.twitter.com/KuFmdVfnHi
— ANI (@ANI) December 29, 2022CBSE Class 10 & 12 exams to start from February 15, 2023 pic.twitter.com/KuFmdVfnHi
— ANI (@ANI) December 29, 2022
ಸಿಬಿಎಸ್ಐ ಮಂಡಳಿಯು ಜೆಇಇ ಮುಖ್ಯ ಪರೀಕ್ಷೆ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಇದೇ ವೇಳೆ ಯಾವುದೇ ವಿದ್ಯಾರ್ಥಿಗಳಿಗೂ ಇತರ ವಿಷಯಗಳ ಪರೀಕ್ಷೆಗೆ ತೊಂದರೆಯಾಗದಂತೆ ಪರೀಕ್ಷಾ ದಿನಾಂಕ ನಿಗದಿ ಪಡಿಸಲಾಗಿದೆ ಎಂದು ಹೇಳಿದೆ.
ಜೊತೆಗೆ ಸಿಬಿಎಸ್‌ಇಯು 10, 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಓದಿಕೊಳ್ಳಲು 15 ನಿಮಿಷಗಳ ಓದುವ ಸಮಯವನ್ನು ನೀಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಯನ್ನು ಸಿಬಿಎಸ್ಐಯ ಅಧಿಕೃತ ವೆಬ್‌ಸೈಟ್ cbse.gov.inನಲ್ಲಿ ಪರಿಶೀಲಿಸಬಹುದು.
ಇದನ್ನೂ ಓದಿ: FIDE ವಿಶ್ವ ರ‍್ಯಾಪಿಡ್ ಚೆಸ್: ಕಂಚಿನ ಪದಕ ಗೆದ್ದ ಭಾರತದ ಸವಿತಾಶ್ರೀ ಬಾಸ್ಕರ್