ಚೆನ್ನೈ(ತಮಿಳುನಾಡು): ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಕುಟುಂಬದ ಸದಸ್ಯರು ಸೇರಿದಂತೆ ಅನೇಕರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕನೂರಿನಲ್ಲಿ ಪತನಗೊಂಡಿದೆ. ಇದರಲ್ಲಿ ಒಟ್ಟು 14 ಜನರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಹೆಲಿಕಾಫ್ಟರ್ನಲ್ಲಿದ್ದ 14 ಜನರಲ್ಲಿ 13 ಜನ ಮೃತಪಟ್ಟಿದ್ದಾರೆ ಎಂದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಆದರೆ ಡಿಎನ್ಎ ಮೂಲಕ ಮೃತದೇಹಗಳನ್ನು ಪತ್ತೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಸೇನಾ ವಿಮಾನದಲ್ಲಿ ಯಾರೆಲ್ಲ ಪ್ರಯಾಣ
ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ತೇಜ್, ಹವಲ್ದಾರ್ ಸತ್ಪಾಲ್ ಪ್ರಯಾಣ ಮಾಡುತ್ತಿದ್ದರು.
ಈಗಾಗಲೇ ಲಭ್ಯವಾಗಿರುವ ಮಾಹಿತಿ ಪ್ರಕಾರ ಘಟನಾ ಸ್ಥಳದಲ್ಲಿ ಐವರ ಮೃತದೇಹ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನ ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಹ ಸೇರಿಕೊಂಡಿದ್ದಾರೆ.
-
The IAF Mi-17V5 helicopter was airborne from Sulur for Wellington. There were 14 persons on board, including the crew: Indian Air Force https://t.co/gmpEuHF1zw
— ANI (@ANI) December 8, 2021 " class="align-text-top noRightClick twitterSection" data="
">The IAF Mi-17V5 helicopter was airborne from Sulur for Wellington. There were 14 persons on board, including the crew: Indian Air Force https://t.co/gmpEuHF1zw
— ANI (@ANI) December 8, 2021The IAF Mi-17V5 helicopter was airborne from Sulur for Wellington. There were 14 persons on board, including the crew: Indian Air Force https://t.co/gmpEuHF1zw
— ANI (@ANI) December 8, 2021
ಇದನ್ನೂ ಓದಿರಿ: ತಮಿಳುನಾಡಿನ ಊಟಿ ಬಳಿ ಭೀಕರ ದುರಂತ; ಸಿಡಿಎಸ್ ಬಿಪಿನ್ ರಾವತ್ ಸೇರಿ ಹಲವರಿದ್ದ ಹೆಲಿಕಾಪ್ಟರ್ ಪತನ
ಸೇನಾ ಹೆಲಿಕಾಪ್ಟರ್ ಕನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ತೆರಳುತ್ತಿತ್ತು. ಈ ವೇಳೆ ನೀಲಗಿರಿ ಅರಣ್ಯ ಪ್ರದೇಶದ ಕನೂರು ಬಳಿ ಅಪಘಾತಕ್ಕೀಡಾಗಿದೆ. ಘಟನಾ ಸ್ಥಳದಲ್ಲಿ ಈಗಾಗಲೇ ತೀವ್ರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಬಿಪಿನ್ ರಾವತ್ ಸೇರಿದಂತೆ ಕೆಲವರನ್ನ ಈಗಾಗಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಇದ್ದು ಸ್ಪಷ್ಟನೆ ಬರಬೇಕಿದೆ.