ನವದೆಹಲಿ: 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಗೆ ಈ ವರ್ಷದ ಸೆಪ್ಟೆಂಬರ್ 5 ರಂದು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ಅನುಮೋದನೆ ನೀಡಿದೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಸಂಸದರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಸಚಿವೆ ಪವಾರ್, ಲಸಿಕೆಯನ್ನು 28 ದಿನಗಳ ಅಂತರದಲ್ಲಿ ತಲಾ 0.5 ಮಿಲಿ ಎರಡು ಡೋಸ್‌ಗಳಲ್ಲಿ ನೀಡಲಾಗುವುದು ಎಂದು ಹೇಳಿದ್ದಾರೆ.ವಿದೇಶಗಳೊಂದಿಗೆ ಮಾಡಿಕೊಂಡಿರುವ ಪರಸ್ಪರ ವಿನಿಮಿಯ ನೀತಿ ಅನ್ವಯ ಭಾರತವು 90 ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್-19 ಲಸಿಕೆಯನ್ನು ರಫ್ತು ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಭಾರತಿ ಪ್ರವೀಣ್ ಪವಾರ್ ತಿಳಿಸಿದ್ದಾರೆ.
ಭಾರತ್ ಬಯೋಟೆಕ್‌ನ ಇಂಟ್ರಾನಾಸಲ್ ಕೋವಿಡ್ ಲಸಿಕೆಯನ್ನು ಕೇಂದ್ರ ಆರೋಗ್ಯ ಸಚಿವಾಲಯವು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲು ಅನುಮೋದಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಈ ನಡುವೆ ನಾಸಲ್ ಲಸಿಕೆಗೆ ಭಾರತ ಸರ್ಕಾರ ಕೂಡಾ ಅನುಮೋದನೆ ನೀಡಿದೆ. ಇದನ್ನು ಹೆಟೆರೊಲಾಜಸ್ ಬೂಸ್ಟರ್ ಆಗಿ ಬಳಸಲಾಗುತ್ತದೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮೊದಲು ಲಭ್ಯವಿರುತ್ತದೆ. ಇದನ್ನು ಇಂದಿನಿಂದ COVID-19 ಲಸಿಕೆ ಕಾರ್ಯಕ್ರಮದಲ್ಲಿ ಸೇರಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಅಷ್ಟೇ ಅಲ್ ನಾಸಲ್ ಲಸಿಕೆಯನ್ನು COWIN ಅಪ್ಲಿಕೇಶನ್‌ಗೆ ಸೇರಿಸುವ ಸಾಧ್ಯತೆಯಿದೆ ಇದೆ ಎಂದು ತಿಳಿದು ಬಂದಿದೆ. ಚೀನಾ ಮತ್ತು ಇತರ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ತೀವ್ರತೆಯ ಮಧ್ಯೆ ಲಸಿಕೆಗೆ ಅನುಮೋದನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಿಕ್ಕಿರಿದ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚಿಸಿದ್ದರು. ವಿಶೇಷವಾಗಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಕ್ರಮಗಳನ್ನು ಬಲಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನು ಓದಿ: ಕೋವಿಡ್ ನಿಯಂತ್ರಣಕ್ಕೆ ಎಲ್ಲ ಕ್ರಮ.. ಔಷಧ ಸಾಗಣೆಗೆ ಡ್ರೋನ್ಗಳ ಬಳಕೆ; ಜ್ಯೋತಿರಾದಿತ್ಯ ಸಿಂದಿಯಾ