ETV Bharat / bharat

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ: ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ

Favour BJP in 3 states, celebrations begin in Delhi: ಮಧ್ಯಪ್ರದೇಶ ಮತ್ತು ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ಪ್ರಧಾನ ಕಚೇರಿ ದೆಹಲಿಯಲ್ಲಿ ಸಂಭ್ರಮಾಚರಣೆ ಆರಂಭವಾಗಿದೆ.

ಸಂಭ್ರಮಾಚರಣೆ
ಸಂಭ್ರಮಾಚರಣೆ
author img

By ETV Bharat Karnataka Team

Published : Dec 3, 2023, 12:48 PM IST

ನವದೆಹಲಿ: ರಾಜಸ್ಥಾನ ಹಾಗೂ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಗಣನೀಯ ಮುನ್ನಡೆ ಸಾಧಿಸುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ.

ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ. "ಇದು ಬಿಜೆಪಿಗೆ ಸಕರಾತ್ಮಕ ಬೆಳವಣಿಗೆಯನ್ನು ಸೂಚಿಸುತ್ತಿದೆ. ಪಕ್ಷವು ಪ್ರತಿ ರಾಜ್ಯದಲ್ಲೂ ಮುನ್ನಡೆ ಸಾಧಿಸುತ್ತಿದೆ. ಮತ ಹಂಚಿಕೆ ಮತ್ತು ಸೀಟು ಹಂಚಿಕೆ ಎರಡರಲ್ಲೂ ನಾವು ಎಲ್ಲಾ ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ" ಎಂದು ಸಂತಸ ವ್ಯಕ್ತಪಡಿಸಿದರು.

ಪ್ರಿಯಾಂಕಾ ಗಾಂಧಿಗೆ ಟಾಂಗ್: "ರಾಜಸ್ಥಾನದಲ್ಲಿ ಪ್ರಿಯಾಂಕಾ ಗಾಂಧಿ "ನಾನು ಹುಡುಗಿ, ನಾನು ಹೋರಾಡಬಲ್ಲೆ" ಎಂಬ ಘೋಷಣೆಯನ್ನು ಮಾಡಿದ್ದರು. ಆದರೆ, ಕಳೆದ ಐದು ವರ್ಷಗಳಲ್ಲಿ ಇಡೀ ರಾಜ್ಯವು ದುರಾಡಳಿತಕ್ಕೆ ಒಳಪಟ್ಟಿದೆ. ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಪಕ್ಷದ ನಾಯಕರು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಬದಲು ನಾಚಿಕೆಯಿಲ್ಲದ ಹೇಳಿಕೆಗಳನ್ನು ಕೊಡುತ್ತಾರೆ. ಇಂದಿನ ಚುನಾವಣೆ ಮೂಲಕ ರಾಜಸ್ಥಾನದ ಮಹಿಳೆಯರು ಪ್ರಿಯಾಂಕಾ ಗಾಂಧಿಗೆ ಉತ್ತರ ನೀಡಿದ್ದಾರೆ ಎಂಬುದನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು ಎಂದು ಸಿರ್ಸಾ ವ್ಯಂಗ್ಯವಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣೆ ನಡೆದ ಎಲ್ಲ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿತ್ತು. ರಾಜಸ್ಥಾನದಲ್ಲಿ ಕೇವಲ 80 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆದು ಅಧಿಕಾರವಂಚಿತವಾಗಿತ್ತು. ಇನ್ನು ಮಧ್ಯಪ್ರದೇಶದಲ್ಲಿ ಕಳೆದ ಬಾರಿ 109 ಸ್ಥಾನಕ್ಕೆ ಕುಸಿದು ಆರಂಭಿಕ ಹಂತದಲ್ಲಿ ಅಧಿಕಾರ ವಂಚಿತವಾಗಿತ್ತು. ಆದರೆ ಜ್ಯೋತಿರಾದಿತ್ಯ ಸಿಂದಿಯಾ ಬಿಜೆಪಿಗೆ ಬಂದಿದ್ದರಿಂದ ಶಿವರಾಜ್​ ಸಿಂಗ್​ ಚೌಹಾಣ್​ ಮತ್ತೆ ಸಿಎಂ ಆಗಿದ್ದರು. ಆದರೆ ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಭರ್ಜರಿ ಜಯ ಸಾಧಿಸಿತ್ತು. ಒಟ್ಟಾರೆ ಕಾಂಗ್ರೆಸ್​ ಕಳೆದ ಬಾರಿಯ ಜಯವನ್ನು ಮರುಕಳಿಸುವಲ್ಲಿ ವಿಫಲವಾಗಿದೆ. ಈ ಬಾರಿ ಬಿಜೆಪಿ ಕಮಾಲ್ ಮಾಡಿದ್ದು, ಕಾರ್ಯಕರ್ತರಲ್ಲಿ ಹುಮ್ಮಸ್ಸನ್ನು ನೂರ್ಮಡಿಗೊಳಿಸಿದೆ.

ಪ್ರಸ್ತುತ ನಾಲ್ಕು ರಾಜ್ಯಗಳ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಪ್ರದೇಶ ಮತ್ತು ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮರುಭೂಮಿ ರಾಜ್ಯ ರಾಜಸ್ಥಾನದಲ್ಲಿ ಒಟ್ಟು 200 ವಿಧಾನಸಭಾ ಕ್ಷೇತ್ರಗಳ ಪೈಕಿ 199 ಸ್ಥಾನಗಳಿಗೆ ಚುನಾವಣೆ ನಡೆದಿದೆ, ಮಧ್ಯಪ್ರದೇಶದ 230 ವಿಧಾನಸಭಾ ಸ್ಥಾನಗಳು, ಛತ್ತೀಸ್​ಗಢದ 90 ವಿಧಾನಸಭಾ ಸ್ಥಾನ , ತೆಲಂಗಾಣದ 119 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ.

  • Celebrations began in Bharatiya Janata Party (#BJP) headquarters as party has established substantial leads in Madhya Pradesh and Rajasthan.

    BJP leader #ManjinderSinghSirsa, expressed his optimism, saying, "This marks a positive development for BJP, with party taking the lead in… pic.twitter.com/SUM3d4PzzO

    — IANS (@ians_india) December 3, 2023 " class="align-text-top noRightClick twitterSection" data=" ">

ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದ್ದರೆ, ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು, ರಾಜಸ್ಥಾನದಲ್ಲಿ ನವೆಂಬರ್ 25 ರಂದು ಮತ್ತು ತೆಲಂಗಾಣದಲ್ಲಿ ನವೆಂಬರ್ 30 ರಂದು ಮತದಾನ ನಡೆದಿತ್ತು.

ಇದನ್ನೂ ಓದಿ: ತೆಲಂಗಾಣದಲ್ಲಿ ಮುನ್ನಡೆ ಸಾಧಿಸುತ್ತಿರುವ ಕಾಂಗ್ರೆಸ್: ಕಾರ್ಯಕರ್ತರಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.