ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ 1000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ತನ್ನ 4500 ಬ್ರಾಂಚ್ಗಳಲ್ಲಿ ಖಾಲಿ ಇರುವ ಮುಖ್ಯವಾಹಿನಿಯ ಮ್ಯಾನೇಜರ್ ಹುದ್ದೆ ನೇಮಕಾತಿಗೆ ಆದೇಶ ಹೊರಡಿಸಿದೆ. ಗ್ರೇಡ್ ಸ್ಕೇಲ್ 2 ಹುದ್ದೆಗಳು ಇವಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಹಾಕಬುದಾಗಿದೆ.
ಹುದ್ದೆ ವಿವರ: ಮುಖ್ಯವಾಹಿನಿ ವರ್ಗದ ಮಿಡಲ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್ 2ನ 1000 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು. ಈ ಹುದ್ದೆಗಳಿಗೆ ಮಾಸಿಕ 69,810 ರೂ. ವೇತನ ನಿಗದಿ ಮಾಡಲಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 32 ವರ್ಷ ಮೀರಿರಬಾರದು. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 175 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಇತರೆ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಹುದ್ದೆ ಅನುಭವ: ಖಾಸಗಿ ವಲಯದ ಬ್ಯಾಂಕ್ ಅಥವಾ ಆರ್ಆರ್ಬಿಯಲ್ಲಿ ಕನಿಷ್ಠ ಮೂರು ವರ್ಷ ಹುದ್ದೆ ಮಾಡಿದ ಅನುಭವ. ಅಥವಾ ಎಂಬಿಎ ಪದವೀಧರರು ಆರ್ಆರ್ಬಿ, ಖಾಸಗಿ ವಲಯದ ಬ್ಯಾಂಕ್ಗಳಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡಿದ್ದರೆ ಆರು ವರ್ಷದ ಹುದ್ದೆ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಮುನ್ನ ಅಧಿಕೃತ ಅಧಿಸೂಚನೆಯನ್ನು ಪರಿಶೀಲನೆ ನಡೆಸಿ ಮುಂದುವರೆಯತಕ್ಕದ್ದು. ಅರ್ಜಿ ಸಲ್ಲಿಕೆ ಮಾಡುವಾಗ ನಿಖರ ಮಾಹಿತಿ ಮತ್ತು ವಿವರಗಳನ್ನು ಭರ್ತಿ ಮಾಡಬೇಕು. ಆನ್ಲೈನ್ ಅರ್ಜಿ ಶುಲ್ಕದ ಮಾಹಿತಿಯನ್ನು ಭರಿಸಬೇಕು. ಈ ಹುದ್ದೆಗೆ ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 15 ಆಗಿದೆ. ಈ ಹುದ್ದೆಗಳ ಆಯ್ಕೆಗೆ ಲಿಖಿತ ಪರೀಕ್ಷೆ ತಾತ್ಕಾಲಿಕವಾಗಿ ಆಗಸ್ಟ್ ಎರಡು ಅಥವಾ ಮೂರನೇ ವಾರದಲ್ಲಿ ನಡೆಯಬಹುದು.
ಈ ಹುದ್ದೆ ಕುರಿತು ವಿವರವಾದ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಕೃತ ಜಾಲತಾಣ centralbankofindia.co.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: IBPS Recruitment: ಪಿಎನ್ಬಿ ಸೇರಿದಂತೆ ಹಲವು ಬ್ಯಾಂಕ್ಗಳಲ್ಲಿ 4045 ಕ್ಲರ್ಕ್ ಹುದ್ದೆಗೆ ನೇಮಕಾತಿ; ಪದವಿ ಆದವರಿಗೆ ಅವಕಾಶ