ETV Bharat / bharat

ಪೆಟ್ರೋಲ್​, ಡೀಸೆಲ್​ ಕೊಡುಗೆ ಜೊತೆಗೆ ಗ್ಯಾಸ್​ ಸಿಲಿಂಡರ್​ಗಳಿಗೆ ₹200 ಸಬ್ಸಿಡಿ ಘೋಷಣೆ

ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ಘೋಷಿಸಿದೆ. ವಾರ್ಷಿಕವಾಗಿ 12 ಸಿಲಿಂಡರ್ ಬಳಕೆಯ ಮೇಲೆ 200 ರೂಪಾಯಿ ಸಬ್ಸಿಡಿ ನೀಡಿದೆ.

author img

By

Published : May 21, 2022, 8:53 PM IST

central-government
ಗ್ಯಾಸ್​ ಸಿಲಿಂಡರ್​ಗಳಿಗೆ ₹200 ಸಬ್ಸಿಡಿ ಘೋಷಣೆ

ನವದೆಹಲಿ: ಗ್ಯಾಸ್​ ಸಿಲಿಂಡರ್ ದರ ಹೆಚ್ಚಳ, ಸಬ್ಸಿಡಿ ಸ್ಥಗಿತಗೊಳಿಸಿದ್ದಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಜನಾಕ್ರೋಶ ಶಮನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಪೆಟ್ರೋಲ್​- ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದ ಜೊತೆಗೆ ಗ್ಯಾಸ್ ಸಿಲಿಂಡರ್ ಮೇಲೆ 200 ರೂ. ಸಬ್ಸಿಡಿ ಘೋಷಿಸಿದೆ.

ಗ್ಯಾಸ್ ಸಿಲಿಂಡರ್ ಬೆಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶನಿವಾರ ಮಹತ್ವದ ಘೋಷಣೆ ಮಾಡಿದ್ದು, ಗ್ಯಾಸ್ ಸಿಲಿಂಡರ್‌ಗಳ ಮೇಲೆ 200 ರೂಪಾಯಿ ಸಬ್ಸಿಡಿಯನ್ನು ನೀಡಿದೆ. ಇದು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ಸಬ್ಸಿಡಿ ಲಭ್ಯವಾಗಲಿದೆ.

ಆದರೆ, ಈ ಸಬ್ಸಿಡಿ ಪಡೆದುಕೊಳ್ಳುವ ಫಲಾನುಭವಿಗಳಿಗೆ ಷರತ್ತು ಕೂಡ ವಿಧಿಸಲಾಗಿದೆ. ಸರ್ಕಾರ ನೀಡುವ ಸಬ್ಸಿಡಿಯನ್ನು ವಾರ್ಷಿಕವಾಗಿ 12 ಸಿಲಿಂಡರ್‌ಗಳಿಗೆ ಮಾತ್ರ ನೀಡಲಾಗುವುದು ಎಂದು ವಿತ್ತ ಸಚಿವಾಲಯ ಮಾಹಿತಿ ನೀಡಿದೆ.

ಈ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಪ್ರಧಾನಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ವರ್ಷ ಪ್ರತಿ ಗ್ಯಾಸ್ ಸಿಲಿಂಡರ್‌ಗೆ (12 ಸಿಲಿಂಡರ್‌ಗಳವರೆಗೆ) 200 ರೂಪಾಯಿ ಸಬ್ಸಿಡಿ ಪಡೆಯಲಿದ್ದಾರೆ. ಇದು ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಸುಮಾರು 6,100 ಕೋಟಿ ವಾರ್ಷಿಕ ಆದಾಯದ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ಓದಿ: ಗುಡ್​ನ್ಯೂಸ್​: ಕೇಂದ್ರದಿಂದ ಅಬಕಾರಿ ಸುಂಕ ಕಡಿತ; ಪೆಟ್ರೋಲ್ 9.5, ಡಿಸೇಲ್ ದರ 7 ರೂ. ಇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.