ETV Bharat / bharat

ಕೇಂದ್ರ ಸರ್ಕಾರ ದೆಹಲಿಗೆ ಕೋವ್ಯಾಕ್ಸಿನ್​ ಸರಬರಾಜನ್ನು ನಿಯಂತ್ರಿಸುತ್ತಿದೆ : ಡಿಸಿಎಂ ಸಿಸೋಡಿಯಾ ಆರೋಪ

ಭಾರತದ ಬಳಕೆಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಲಸಿಕೆಗಳನ್ನು ಅನುಮೋದಿಸಬೇಕು. ಮೂರು ತಿಂಗಳೊಳಗೆ ಎಲ್ಲರಿಗೂ ಲಸಿಕೆ ನೀಡುವಂತೆ ರಾಜ್ಯಗಳಿಗೆ ಸೂಚಿಸಬೇಕು ಎಂದಿದ್ದಾರೆ..

Manish Sisodia
ಸಿಸೋಡಿಯಾ ಆರೋಪ
author img

By

Published : May 12, 2021, 3:50 PM IST

ದೆಹಲಿ : ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ಕೋವಾಕ್ಸಿನ್ ಡೋಸ್ ನೀಡಲು ಸಾಧ್ಯವಿಲ್ಲ ಎಂದು ಲಸಿಕೆ ತಯಾರಕ ಭಾರತ್ ಬಯೋಟೆಕ್ ದೆಹಲಿ ಸರ್ಕಾರಕ್ಕೆ ತಿಳಿಸಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆ ಪೂರೈಕೆ ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈಗಗಲೇ ಕೋವಾಕ್ಸಿನ್ ದಾಸ್ತಾನು ಮುಗಿದಿದ್ದು, ಇದರ ಪರಿಣಾಮವಾಗಿ 17 ಶಾಲೆಗಳಲ್ಲಿ ಸ್ಥಾಪಿಸಲಾದ ಸುಮಾರು 100 ಲಸಿಕಾ ಕೇಂದ್ರಗಳನ್ನು ಬಂದ್ ಮಾಡಲಾಗಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.

ಸಂಬಂಧಪಟ್ಟ ಸರ್ಕಾರಿ ಅಧಿಕಾರಿಯ ಸೂಚನೆಯ ಮೇರೆಗೆ ಲಸಿಕೆ ಲಭ್ಯವಿಲ್ಲದ ಕಾರಣ ದೆಹಲಿ ಸರ್ಕಾರಕ್ಕೆ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ ಎಂದು ಕೋವಾಕ್ಸಿನ್ ತಯಾರಕರು ಪತ್ರದ ಮುಖೇನ ತಿಳಿಸಿದ್ದಾರೆ.

ಈ ರೀತಿಯಾಗಿ ಮೋದಿ ಸರ್ಕಾರ ಲಸಿಕೆ ಪೂರೈಕೆಯನ್ನು ನಿಯಂತ್ರಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಲಸಿಕೆ ರಫ್ತುನ್ನು ನಿಲ್ಲಿಸಬೇಕು.

ಭಾರತದ ಬಳಕೆಗಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಲಸಿಕೆಗಳನ್ನು ಅನುಮೋದಿಸಬೇಕು. ಮೂರು ತಿಂಗಳೊಳಗೆ ಎಲ್ಲರಿಗೂ ಲಸಿಕೆ ನೀಡುವಂತೆ ರಾಜ್ಯಗಳಿಗೆ ಸೂಚಿಸಬೇಕು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.