ETV Bharat / bharat

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ: ಶೇ.4ರಷ್ಟು ಡಿಎ ಹೆಚ್ಚಳ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಡಿಎ ಏರಿಕೆಗೆ ತೀರ್ಮಾನ ಮಾಡಲಾಗಿದೆ.

central-government-increased-dearness-allowance
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
author img

By

Published : Sep 28, 2022, 3:31 PM IST

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ತುಟ್ಟಿಭತ್ಯೆ (ಡಿಎ)ಯನ್ನು ಶೇ.4ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದ 50 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು 62 ಲಕ್ಷ ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇಂದಿನ ಶೇ.4ರಷ್ಟು ಡಿಎ ಹೆಚ್ಚಳದಿಂದ ಸರ್ಕಾರಿ ನೌಕರರಿಗೆ ನೀಡಲಾಗುವ ಒಟ್ಟು ಡಿಎ ಶೇ.34ರಿಂದ ಶೇ.38ಕ್ಕೆ ಏರಿಕೆಗೊಂಡಂತೆ ಆಗಿದೆ. ಡಿಎ ಮೂಲ ವೇತನದ ಮೇಲೆ ನಿರ್ಧರಿಸಲಾಗುತ್ತದೆ ಮತ್ತು ಇದನ್ನು ಮೂಲ ವೇತನಕ್ಕೆ ಸೇರಿಸಲಾಗುತ್ತದೆ.

ಸರ್ಕಾರವು ಸಾಮಾನ್ಯವಾಗಿ ವರ್ಷದಲ್ಲಿ ಜನವರಿ ಮತ್ತು ಜುಲೈ ತಿಂಗಳಲ್ಲಿ ಎರಡು ಬಾರಿ ಡಿಎ ಪರಿಷ್ಕರಿಸುತ್ತದೆ. ಈಗ ಜುಲೈ ತಿಂಗಳಿಂದ ಪೂರ್ವನ್ವಯವಾಗುವಂತೆ ಡಿಎ ಘೋಷಿಸಲಾಗಿದೆ. ರಾಜ್ಯ ಸರ್ಕಾರಗಳೂ ಇದನ್ನು ಅನುಸರಿಸುವ ಸಾಧ್ಯತೆ ಇದೆ.

ಇದಲ್ಲದೇ, ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 3 ತಿಂಗಳವರೆಗೆ ಡಿಸೆಂಬರ್‌ವರೆಗೆ ವಿಸ್ತರಿಸಲು ಮುಂದಾಗಿದೆ.

ಇದನ್ನೂ ಓದಿ: ಕಷ್ಟಕಾಲದಲ್ಲಿ ಕೈಹಿಡಿಯುವ ಸಪ್ಲಿಮೆಂಟರಿ ರೈಡರ್ ವಿಮೆ: ಇಲ್ಲಿದೆ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.