ನವದೆಹಲಿ: ಫೆಬ್ರವರಿ 1 ಮತ್ತು ಮಾರ್ಚ್ 11 ರ ನಡುವೆ 22,500 ಭಾರತೀಯ ನಾಗರಿಕರನ್ನು ಉಕ್ರೇನ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ ಎಂದು ವಿಮಾನಯಾನ ಖಾತೆ ರಾಜ್ಯ ಸಚಿವ ನಿವೃತ್ತ ಜನರಲ್ ವಿ.ಕೆ.ಸಿಂಗ್ ರಾಜ್ಯಸಭೆಗೆ ತಿಳಿಸಿದರು.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ಬಳಿಕ ಅಂದರೆ ಫೆ.26 ರಿಂದ ಕೇಂದ್ರ ಸರ್ಕಾರ ಉಕ್ರೇನ್‌ನ ನೆರೆಯ ದೇಶಗಳಾದ ಹಂಗೇರಿ, ರೊಮೇನಿಯಾ ಮತ್ತು ಪೋಲೆಂಡ್‌ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಿದೆ ಎಂದು ಅವರು ಹೇಳಿದರು.
ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ಸುಮಾರು 90 ವಿಮಾನಗಳಲ್ಲಿ 22,500 ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರನ್ನು ಕರೆತರಲಾಗಿದೆ. ವಾಯುಪಡೆಗೆ ಸೇರಿದ 14 ವಿಮಾನಗಳು ಕೂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ ಎಂದು ಅವರು ಹೇಳಿದರು.
ಇದನ್ನೂ ಓದಿ: 2018-2020ರಲ್ಲಿ 1 ಲಕ್ಷಕ್ಕೂ ಅಧಿಕ ಸೇನಾ ನೇಮಕಾತಿ : ಕೇಂದ್ರ ಸಚಿವ ರಾಜನಾಥ್ ಸಿಂಗ್