ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಪಿಜಿಸಿಐಎಲ್) ನಲ್ಲಿ ವಿವಿಧ ಇಂಜಿನಿಯರಿಂಗ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 138 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನ ನೀಡಲಾಗಿದೆ. ಕೇಂದ್ರ ಸರ್ಕಾರದ ಕೆಲಸದಲ್ಲಿ ಆಸಕ್ತಿ ಹೊಂದಿರುವ ಸೂಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸ ಬಹುದಾಗಿದೆ. ಈ ಹುದ್ದೆ ವಿವರ, ನೇಮಕಾತಿ, ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಎಲೆಕ್ಟ್ರಿಕಲ್, ಸಿವಿಲ್, ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ನಲ್ಲಿ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಭಾರತದಾದ್ಯಂತ ನೇಮಕಾತಿ ನಡೆಸಲಾಗುವುದು.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್, ಸಿವಿಲ್, ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ನಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು. ಜೊತೆಗೆ ಗೇಟ್ 2023ರ ಸ್ಕೋರ್ ಕೂಡ ಅರ್ಜಿ ಸಲ್ಲಿಕೆಗೆ ಪ್ರಮುಖವಾಗಿದೆ.
ಪಿಜಿಸಿಐಎಲ್ನ ನಿಯಮ ಅನುಸಾರವಾಗಿ ವಯೋಮಿತಿ ಮತ್ತು ವೇತನ ನಿಗದಿಸಲಾಗಿದೆ. ಈ ಸಂಭದ ಸೆಪ್ಟೆಂಬರ್ 2019ರಲ್ಲಿ ಕೂಡ ಅಧಿಸೂಚನೆ ಪ್ರಕಟಿಸಲಾಗಿದ್ದು, ಅದೇ ಅರ್ಹತೆ ಅನುಸಾರ ಈ ಹೊಸ ನೇಮಕಾತಿ ನಡೆಯಲಿದೆ.
ಅರ್ಜಿ ಶುಲ್ಕ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ 500 ರೂ ಶುಲ್ಕ ನಿಗದಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ನಿವೃತ್ತ ಸೇವಾಧಿಕಾರಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಲಾಗಿಒದೆ.
ಈ ಹುದ್ದೆಯನ್ನು ಗೇಟ್ ಮಾರ್ಕ್ಸ್ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆ ಅರ್ಜಿ ಸಲ್ಲಿಕೆ ಆರಂಭ ಮಾರ್ಚ್ 27ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮತ್ತು ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಏಪ್ರಿಲ್ 18 ಆಗಿದೆ. ಈ ಹುದ್ದಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅಲ್ಲಿನ ನಿಗದಿತ ಅರ್ಜಿಯಲ್ಲಿಯೇ ಅರ್ಜಿ ಸಲ್ಲಿಕೆ ಮಾಡಬೇಕು.
- ಅರ್ಜಿ ಸಲ್ಲಿಕೆಗೆ ಮುನ್ನ ಅಗತ್ಯ ದಾಖಲೆ ಮತ್ತು ಪ್ರಮಾಣಪತ್ರಗಳ ಭರ್ತಿ ನಡೆಸಬೇಕು.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಪವರ್ ಗ್ರೀಡ್ ಕಾರ್ಪೊರೇಷನ್ ಆಫ್ ಇಂಡಿಯಾದ ಅಧಿಕೃತ ಜಾಲತಾಣ powergridindia.com ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ವಿಮೂಲ್ನಲ್ಲಿದೆ ನೌಕರಿ; 97 ಸಾವಿರದವರೆಗೆ ವೇತನ