ETV Bharat / bharat

ಕಾಶ್ಮೀರಿ ಮುಸ್ಲಿಮರನ್ನು ವಿಭಜಿಸಿ, ಅವರನ್ನು ಆಳಲು ಕೇಂದ್ರ ಸರ್ಕಾರ ಬಯಸುತ್ತದೆ : ಫಾರೂಕ್ ಅಬ್ದುಲ್ಲಾ - National Conference President and former Chief Minister Dr Farooq Abdullah

ಭಯೋತ್ಪಾದನೆ ಆರೋಪದ ಮೇಲೆ ಸರ್ಕಾರಿ ನೌಕರರನ್ನು ವಜಾಗೊಳಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಫಾರೂಕ್ ಅಬ್ದುಲ್ಲಾ, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರಿಗೆ 50,000 ಉದ್ಯೋಗಗಳನ್ನು ನೀಡುವುದಾಗಿ ಹೇಳಿತ್ತು..

ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ
author img

By

Published : Sep 28, 2021, 7:03 PM IST

ಶ್ರೀನಗರ(ಜಮ್ಮು-ಕಾಶ್ಮೀರ) : ಕೇಂದ್ರ ಸರ್ಕಾರವು ಹೊಸ ರಾಜಕೀಯ ಪಕ್ಷಗಳನ್ನು ಬೆಂಬಲಿಸುವ ಮೂಲಕ ಕಾಶ್ಮೀರದಲ್ಲಿ ಮುಸ್ಲಿಮರನ್ನು ವಿಭಜಿಸಲು ಹಾಗೂ ಅವರನ್ನು ಆಳಲು ಬಯಸುತ್ತದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ (NC) ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಫಾರೂಕ್ ಅಬ್ದುಲ್ಲಾ ಮಾತನಾಡಿರುವುದು..

ಶ್ರೀನಗರದಲ್ಲಿ ತಮ್ಮ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಕೇಂದ್ರ ಸರ್ಕಾರದ್ದು 'ಒಡೆದು ಆಳುವ ನೀತಿ'. ಈ ತಂತ್ರವನ್ನು ಮೊದಲಿನಿಂದಲೂ ಪ್ರಯತ್ನಿಸುತ್ತಲೇ ಇದ್ದು, ಜನರು ಒಗ್ಗೂಡಿ ಸೋಲಿಸಬೇಕು ಎಂದರು.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉತ್ತಮ ಆಡಳಿತ ನೀಡುವ ವಿಶ್ವಾಸವಿದೆ: ಫಾರೂಕ್‌ ಅಬ್ದುಲ್ಲಾ

ಭಯೋತ್ಪಾದನೆ ಆರೋಪದ ಮೇಲೆ ಸರ್ಕಾರಿ ನೌಕರರನ್ನು ವಜಾಗೊಳಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಫಾರೂಕ್ ಅಬ್ದುಲ್ಲಾ, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರಿಗೆ 50,000 ಉದ್ಯೋಗಗಳನ್ನು ನೀಡುವುದಾಗಿ ಹೇಳಿತ್ತು.

ಆದರೆ, ಅದರ ಬದಲಾಗಿ ಅವರು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿದ್ದಾರೆ. ಇದು ಭಯೋತ್ಪಾದನೆಯನ್ನು ಕಡಿಮೆ ಮಾಡುವುದಿಲ್ಲ. ಬದಲಾಗಿ ಅದನ್ನು ಹೆಚ್ಚಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯನ್ನು ಹೊರತುಪಡಿಸಿ ಕಾಶ್ಮೀರ ಕಣಿವೆಯ ಎಲ್ಲಾ ರಾಜಕೀಯ ಪಕ್ಷಗಳು 370ನೇ ವಿಧಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಪುನಃ ಸ್ಥಾಪಿಸಲು ಒಗ್ಗಟ್ಟಾಗಿವೆ ಎಂದು ಇದೇ ವೇಳೆ ಫಾರೂಕ್ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.