ರಾಷ್ಟ್ರೀಯ ತನಿಖಾ ದಳ (ಎನ್ಐಎ)ನಲ್ಲಿ ಡಾಟಾ ಎಂಟ್ರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ. ಪೇ ಮ್ಯಾಟ್ರಿಕ್ ಲೆವೆಲ್ 5ರ ವೇತನ ಈ ಹುದ್ದೆಗೆ ನಿಗದಿಯಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ.
ಹುದ್ದೆ ವಿವರ: ಎನ್ಐಎನಲ್ಲಿರುವ 34 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಕೇಂದ್ರ ಗೃಹ ಸಚಿವಾಲಯ ಮುಂದಾಗಿದೆ. ಐಟಿ ಪೋಸ್ಟ್ ಇದಾಗಿದ್ದು, ನಿಯೋಜನೆ ಮೇಲೆ ಈ ಹುದ್ದೆ ಭರ್ತಿ ಮಾಡಲಾಗುವುದು. ಈ ಹಿನ್ನೆಲೆ ಈಗಾಗಲೇ ಕೇಂದ್ರ ಸರ್ಕಾರದ ಸೇವೆಯಲ್ಲಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ.
ವೇತನ: ಈ ಹುದ್ದೆಗಳನ್ನು ದೇಶಾದ್ಯಂತ ನೇಮಕಾತಿ ಮಾಡಲಾಗುವುದು. ಪೇ ಮ್ಯಾಟ್ರಿಕ್ಸ್ ಲೆವೆಲ್-6 ಅಂದರೆ, 29,200 ರೂ ನಿಂದ 92,300 ರೂ ವೇತನ ನಿಗದಿಯಾಗಿದೆ.
ಹುದ್ದೆ ಆಯ್ಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಎನ್ಐಎ ನಿಯಮದಂತೆ 56 ವರ್ಷ ಮೀರಿರದ ಕೇಂದ್ರ ಸರ್ಕಾರಿ ನೌಕರರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅಧಿಕೃತ ಅಧಿಸೂಚನೆ ಜೊತೆಗೆ ಅಭ್ಯರ್ಥಿಗಳ ಅರ್ಜಿ ನಮೂನೆಯನ್ನು ಪ್ರಕಟಿಸಲಾಗಿದೆ. ಈ ನಿಗದಿತ ಅರ್ಜಿ ನಮೂನೆಯಲ್ಲಿಯೇ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಬೇಕಿದೆ.
ಈ ವೇಳೆ ಅಭ್ಯರ್ಥಿಗಳು ಈ ಹಿಂದೆ ಯಾವ ಇಲಾಖೆಯಲ್ಲಿ ಯಾವ ಉದ್ಯೋಗ ನಿರ್ವಹಣೆ ಮಾಡುತ್ತಿದ್ದರು ಎಂಬ ಮಾಹಿತಿ, ಹುದ್ದೆ ಸ್ವರೂಪ, ಜೊತೆಗೆ ಭಾರತ ಸರ್ಕಾರದ ಮಾನ್ಯತೆ ಪಡೆದ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಿಂದ ಒ ಅಥವಾ ಎ ಪ್ರಮಾಣಪತ್ರವನ್ನು ಹೊಂದಿದ್ದು, ಅದರ ಪ್ರತಿ, ಅರ್ಜಿಯಲ್ಲಿ ಕೇಳಲಾಗಿರುವ ಇನ್ನಿತರ ಪ್ರಮಾಣ ಪತ್ರಗಳನ್ನು ಲಗತ್ತಿಸಿ, ಕೆಳಗಿನ ವಿಳಾಸಕ್ಕೆ ಅರ್ಜಿ ಆಹ್ವಾನಿಸಿದ 45 ದಿನಗಳ ಒಳಗಾಗಿ ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಸುವ ವಿಳಾಸ: ಎಸ್ಪಿ (ಆಡಳಿತಾತ್ಮಕ), ಎನ್ಐಎ ಮುಖ್ಯ ಕಚೇರಿ, ಜಿಸಿಒ ಸಂಕೀರ್ಣ ಎದುರು, ಲೋಧಿ ರಸ್ತೆ, ನವದೆಹಲಿ -110003 ಇಲ್ಲಿಗೆ ಅರ್ಜಿ ಸಲ್ಲಿಕೆ ಮಾಡಬೇಕು.
ಅರ್ಜಿ ಸಲ್ಲಿಕೆ ದಿನಾಂಕ: ಜುಲೈ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 22 ಆಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಪಡೆಯಲು ಅಭ್ಯರ್ಥಿಗಳು nia.gov.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: Job Alert: ರಾಯಚೂರು ಜಿಲ್ಲಾ ಪಂಚಾಯತಿಯಲ್ಲಿದೆ ಉದ್ಯೋಗ; 35 ಸಾವಿರ ರೂಪಾಯಿ ವೇತನ