ETV Bharat / bharat

'ಪದ್ಮ ಪ್ರಶಸ್ತಿ'ಗೆ ಸಾಧಕರ ಹೆಸರು ಅನುಮೋದಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

author img

By

Published : Jun 4, 2021, 8:49 PM IST

2022ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪದ್ಮ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಭಾವಂತ ವ್ಯಕ್ತಿಗಳನ್ನು ಸೂಚಿಸಲು ವಿಶೇಷ ಸಮಿತಿಗಳನ್ನು ರಚಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳನ್ನು ತಿಳಿಸಿದೆ.

Centre asks states to set up special search committees to find unsung heroes for Padma awards

ನವದೆಹಲಿ: ಭಾರತ ಸರ್ಕಾರದಿಂದ ಕೊಡಮಾಡುವ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗೊಳ್ಳುವ ಪ್ರತಿಭಾವಂತ ವ್ಯಕ್ತಿಗಳನ್ನು ಸೂಚಿಸಲು ವಿಶೇಷ ಸಮಿತಿಗಳನ್ನು ರಚಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ತಿಳಿಸಿದೆ. ನರೇಂದ್ರ ಮೋದಿ ಸರ್ಕಾರವು ವಿವಿಧ ರೀತಿಯಲ್ಲಿ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಅನೇಕ ಸಾಧಕರನ್ನು ಗುರುತಿಸುವಂತೆ ಸೂಚನೆ ನೀಡಿದೆ.

ಈ ಹಿಂದೆ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗಿದ್ದರೂ, ಹಲವಾರು ಪ್ರತಿಭಾವಂತ ವ್ಯಕ್ತಿಗಳು ತಮ್ಮ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡಿದ್ದರೂ ಪರಿಗಣನೆಯಿಂದ ಹೊರಗುಳಿದಿದ್ದರು ಎಂದು ಗೃಹ ಸಚಿವಾಲಯ ಹೇಳಿದೆ.

ಆದ್ದರಿಂದ, ಅವರ ಶ್ರೇಷ್ಠತೆ ಮತ್ತು ಸಾಧನೆಗಳು, ಗುರುತಿಸಬೇಕಾದ ಅರ್ಹತೆ ಮತ್ತು ಅವರ ಪರವಾಗಿ ಸೂಕ್ತವಾದ ನಾಮನಿರ್ದೇಶನಗಳನ್ನು ಮಾಡುವಲ್ಲಿ ಸಂಘಟಿತ ಪ್ರಯತ್ನಗಳನ್ನು ಮಾಡಲು ವಿನಂತಿಸಲಾಗಿದೆ. ಅಂತಹ ಅರ್ಹ ವ್ಯಕ್ತಿಗಳ ಗುರುತಿಸುವಿಕೆಯು ಈ ಪ್ರಶಸ್ತಿಗಳ ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ.

2022ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪದ್ಮ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.