ETV Bharat / bharat

ಆರ್​ಬಿಐ ಗವರ್ನರ್​​ ಶಕ್ತಿಕಾಂತ ದಾಸ್ ಅಧಿಕಾರವಧಿ ವಿಸ್ತರಣೆ - ಶಕ್ತಿಕಾಂತ ದಾಸ್ ಮರುನೇಮಕ

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅವರನ್ನು ಮರುನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿಯು ಅನುಮೋದಿಸಿದೆ.

Centre extends RBI Governor Shaktikanta Das' term for three years
ಮುಂದಿನ ಮೂರು ವರ್ಷಗಳಿಗೆ ಆರ್​ಬಿಐ ಗವರ್ನರ್​​ ಶಕ್ತಿಕಾಂತ ದಾಸ್ ಅಧಿಕಾರ ವಿಸ್ತರಣೆ
author img

By

Published : Oct 29, 2021, 9:21 AM IST

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಅವಧಿಗೆ ವಿಸ್ತರಿಸಿ ಶುಕ್ರವಾರ ಆದೇಶ ಹೊರಡಿಸಿದೆ.

10.12.2021ರ ನಂತರ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಯಾವುದು ಮೊದಲೋ ಅಲ್ಲಿಯವರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅವರನ್ನು ಮರುನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ಅಧಿಕೃತ ಪ್ರಕಟಣೆ ಹೊರಡಿಸಿದೆ.

ಶಕ್ತಿಕಾಂತ ದಾಸ್ ಅವರು ಡಿಸೆಂಬರ್ 2018ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ನೇಮಕಗೊಂಡಿದ್ದರು. ತಮಿಳುನಾಡು ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದ ಶಕ್ತಿಕಾಂತ ದಾಸ್ ಈಗ ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ತೆಗೆದುಕೊಂಡ ನಿರ್ಧಾರದ ಪ್ರಕಾರ ಮುಂದಿನ ಮೂರು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ಇದನ್ನೂ ಓದಿ: 'ಕಡಿಮೆ ಆಹಾರ ತಿನ್ನಿ..' ಉತ್ತರ ಕೊರಿಯಾ ಜನರಿಗೆ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.